HOSANAGARA PU COLLEGE: ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ..

ಹೊಸನಗರ:ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಜಿಲ್ಲೆ ಹಾಗೂ ಶ್ರೀ ಅರಬಿಂಧೋ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಜಾವಳ್ಳಿ ಇವರ ಆಶ್ರಯದಲ್ಲಿ ಜರುಗಿದ ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಬಾಚುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ  ಎರಡು ಚಿನ್ನದ ಪದಕ ಹಾಗೂ 3 ಬೆಳ್ಳಿಯ ಪದಕವನ್ನು ಪಡೆದಿದ್ದು ಗುಂಪು ಕ್ರೀಡೆಯಲ್ಲಿ 4*400 ರಿಲೇ ದ್ವಿತೀಯ, 4*100 ರಿಲೇ ಪ್ರಥಮ ಸ್ಥಾನ ಹಾಗೆಯೇ ಥ್ರೋಬಲ್ ನಲ್ಲಿ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದ್ದಾರೆ ಹಾಗೆಯೇ ಬಾಲಕರ ವೈಯಕ್ತಿಕ ವಿಭಾಗದಲ್ಲಿ ಗುಡ್ಡಗಾಡು ಓಟದಲ್ಲಿ ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು . ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ
ಜಿಲ್ಲಾ ಮಟ್ಟದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ತರಬೇತಿ ನೀಡಿದ ಶಿಕ್ಷಕರಿಂದ ಮತ್ತು ತರಬೇತಿದಾರರನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ನಾಯಕ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎಂಪಿ ಸುರೇಶ್ ಅಭಿನಂದಿಸಿದ್ದಾರೆ..

HOSANAGARA PU COLLEGE.


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe