
ಹೊಸನಗರ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವಂತಹ ದುರಸ್ತಿ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೆಯೇ ಬೀದಿ ನಾಯಿ ಹಾಗೂ ಮಂಗಗಳ ನಿಯಂತ್ರಣಕ್ಕೆ ಕ್ರಮವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸುವಂತೆ ಪೊಲೀಸ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದವರು ಶೀಘ್ರವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವುದಾಗಿ ಅದಕ್ಕೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.
ಹಾಗೆಯೇ ಪಟ್ಟಣ ಪಂಚಾಯಿತಿ ನೂತನ ಕಚೇರಿ ನಿರ್ಮಾಣ. ಬೀದಿ ದೀಪಗಳ ನಿರ್ವಹಣೆ. ಗಣಪತಿ ಕೆರೆಯ ಅಭಿವೃದ್ಧಿ ಹೀಗೆ ಹಲವು ವಿಚಾರಗಳ ಕುರಿತು ನಿರ್ಣಯವನ್ನು ಕೈಗೊಳ್ಳಲಾಯಿತು.
ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ಚಂದ್ರಕಲಾ,ಸದಸ್ಯರಾದ ಗುರುರಾಜ್, ಸಿಂತಿಯಾ ಸೆರಾವು, ಗುಲಾಬಿ ಮರಿಯಪ್ಪ, ಕೃಷ್ಣವೇಣಿ, ಸುರೇಂದ್ರ ಕೋಟ್ಯಾನ್, ಗಾಯತ್ರಿ ನಾಗರಾಜ್, ಶಾಹಿನ ನಾಸೀರ್, ನಾಮನಿರ್ದೇಶಕ ಸದಸ್ಯರಾದ ಗುರುರಾಜ್, ನಿತ್ಯಾನಂದ, ಉಪಸ್ಥಿತರಿದ್ದರು.
HOSANAGARA NEWS.
Discover more from Prasarana news
Subscribe to get the latest posts sent to your email.