Flash News

HUMCHA:ಸೆ 26 ಹುಂಚದಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ..

ಹೊಸನಗರ: ತಾಲೂಕಿನ ಹುಂಚದ ಶ್ರೀ ಪದ್ಮಾಂಭ ಪ್ರೌಢಶಾಲೆಯ ಸಭಾಭವನದಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26 ರಂದು ಪ್ರಜಾ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಲು ಮತ್ತು ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಲು ಮಹತ್ವಾಕಾಂಕ್ಷೆಯ 'ಪ್ರಜಾಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ರಾಜ್ಯ ಸರ್ಕಾರದ ನೂತನ ಆಡಳಿತಾತ್ಮಕ ಮಾರ್ಗಸೂಚಿಗಳ ಅನ್ವಯ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಆಯೋಜನೆಯಾಗುತ್ತಿರುವ ಈ ಕಾರ್ಯಕ್ರಮದಲ್ಲಿ, ಸಾರ್ವಜನಿಕರು ಆಡಳಿತ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಸರ್ಕಾರದ ಸೇವೆಗಳನ್ನು ನೇರವಾಗಿ ಜನರ ಮನೆಬಾಗಿಲಿಗೇ ತಲುಪಿಸುವುದು ಮುಖ್ಯ ಉದ್ದೇಶವಾಗಿದೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಸ್ವೀಕೃತವಾಗುವ ಅರ್ಜಿಗಳನ್ನು ನೂತನ ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (IPGRS) ತಂತ್ರಾಂಶದಲ್ಲಿ ಅಳವಡಿಸಿ, ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತಕ್ಷಣ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಉಳಿದ ಸಂಕೀರ್ಣ ಅರ್ಜಿಗಳನ್ನು ಗರಿಷ್ಠ 15 ದಿನಗಳ ಒಳಗಾಗಿ ನಿಯಮಾನುಸಾರ ವಿಲೇವಾರಿ ಮಾಡಲು ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಿದ್ದಾರೆ.
ಹುಂಚ ಹೋಬಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತ ಬಾಂಧವರು ಈ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ತಮ್ಮ ಅಹವಾಲುಗಳನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಹೋಬಳಿ ಆಡಳಿತ ವಿನಂತಿಸಿದೆ.

HUMCHA..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading