Flash News

ILEGAL:ಅಕ್ರಮ ಕಲ್ಲು ಗಣಿಗಾರಿಕೆ: ಕಠಿಣ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ

ಹೊಸನಗರ:ತಾಲೂಕಿನ ಮೇಲಿನ ಬೇಸಿಗೆ ಗ್ರಾಮಪಂಚಾಯತ್ ವ್ಯಾಪ್ತಿಯ ಸಾಲಗೇರಿ ಮಜರೆ ಯಲ್ಲಿ ನಿರಂತರ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯ ನಿವಾಸಿ ಸುನಿಲ್ ಗುರುವಾರ ತಹಶೀಲ್ದಾರ ಭರತ್ ರಾಜ್ ಅವರಿಗೆ  ಮನವಿಯನ್ನು ಸಲ್ಲಿಸಿದರು.


ಮನವಿ ಪತ್ರದಲ್ಲಿ ತಿಳಿಸಿರುವಂತೆ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಮೇಲಿನಡೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲಗೇರಿ ಮಜರೆ ಸ.ನಂ. 20ರಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಅಕ್ರಮ ಗಣಿಗಾರಿಕೆ ಮತ್ತು ಜಿಲೆಟಿನ್ ಕಡ್ತ(ಗ್ರಾನೈಟ್) ಬಳಸಿ ಕಲ್ಲು ಒಡೆಯುಕರ ನಡೆಯುತ್ತಿದೆ. ದಂಧೆಕೋರರು ಅಗತ್ಯ ಸರ್ಕಾರಿ ಅನುಮತಿ ಪರವಾನಿಗೆ ಹಾಗೂ ನಿಯಮಾನುಸಾರ ಅಗತ್ಯವಿರುವ ವಿವಿಧ ದಾಖಲೆಗಳನ್ನು ಹೋಂದಿದ್ದಾರೆಯೇ ಎಂಬ ಮಾಹಿತಿಯನ್ನು ಸ್ಥಳಿಯರಿಗೆ ಸ್ಪಷ್ಟಪಡಿಸಿಲ್ಲ. ಆದಾಗ್ಯೂ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಕಲ್ಲುಗಳನ್ನು ತೆಗೆಯಲು ಯಂತ್ರೋಪಕರಣ ಬಳಸುವುದರಿಂದ ಸುತ್ತಮುತ್ತಲಿನ ಭೂ ಪ್ರದೇಶಗಳಲ್ಲಿ ದೂಳು, ಶಬ್ದ ಮತ್ತು ಕಂಪನ ಉಂಟಾಗುತ್ತಿದೆ. ಇದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು, ವೃದ್ಧರ ಆರೋಗ್ಯಕ್ಕೆ ತೊಂದರೆ ಉಂಟಾಗುತ್ತಿದೆ.

ಈ ಪ್ರದೇಶದ ಸುತ್ತಮುತ್ತಲಿನ ಭೂ ಪ್ರದೇಶದಲ್ಲಿ ಧೂಳು, ಶಬ್ದ ಮತ್ತು ಕಂಪನ ಉಂಟಾಗುತ್ತದೆ. ಇದರಿಂದ ಗ್ರಾಮಸ್ಥರು. ವಿದ್ಯಾರ್ಥಿಗಳು, ವೃದ್ಧರ ಆರೋಗ್ಯಕ್ಕೆ ತೊಂದರೆ ಉಂಟಾಗುತ್ತಿದೆ. ಈ ಪ್ರದೇಶದ ಸುತ್ತಮುತ್ತಲಿನ ಕೃಷಿ ಜಮೀನುಗಳು ಮನೆ ರಸ್ತೆ, ಶಾಲೆ, ದೇವಸ್ಥಾನ ಕುಡಿಯುವ ನೀರಿನ ಮೂಲಗಳಿಗೆ ಭಾರೀ ತೊಂದರೆ ಉಂಟಾಗಿದೆ. ಕಲ್ಲುಣಿಗಾರಿಕೆಯಿಂದ ಭೂಮಿಯ ಸ್ವರೂಪದಲ್ಲಿ ಬದಲಾಣೆ ಉಂಟಾಗುತ್ತಿದ್ದು, ಮಳೆಗಾಲದಲ್ಲಿ ಮಣ್ಣು ಕುಸಿತವಾಗುತ್ತಿದೆ. ಕೃಷಿ ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳಿಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗುವ ಪರಿಸ್ಥಿತಿ ಈ ಭಾಗದಲ್ಲಿ ನಿರ್ಮಾಣವಾಗಿದೆ. ಅಲ್ಲದೇ ಈ ಭಾಗಗದಲ್ಲಿ ಹಲವು ಬಡ ಕೂಲಿ ಕಾರ್ಮಿಕರು ವಾಸವಾಗಿದ್ದು, ಕಲ್ಲುಗಣಿಗಾರಿಕೆ ನಡೆಯುತ್ತಿರುವ ಸಮೀಪದಲ್ಲಿಯೇ ಇತಿಹಾಸ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಹ ಇದೆ. ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಭಾರೀ ವಾಹನಗಳು ಸಂಚರಿಸುತ್ತಿದ್ದು, ಗ್ರಾಮೀಣ ರಸ್ತೆಗಳು ಹಾಳಾಗುವ ಸಾಧ್ಯತೆ ಇದೆ. ಅಲ್ಲದೇ ದೂಳಿನಿಂದ ಸಾರ್ವಜನಿಕರಿಗೆ ಭಾರೀ ತೊಂದರೆಯಾಗುತ್ತಿದೆ ವಾಹನ ಸಂಚಾರದಿಂದ ಅಪಘಾತ ಸಂಭಸುವ ಅಪಾಯವೂ ಇದೆ.
ಈ ಹಿನ್ನಲೆಯಲ್ಲಿ ಈ ಕೆಳಗಿನ ಕ್ರಮಗಳನ್ನು ಕೈ ಗೊಳ್ಳುಂತೆ ತಮ್ಮಲ್ಲಿ ವಿನಂತಿಸುತ್ತಿದ್ದೇವೆ.
ಆದುದರಿಂದ ಸಾರ್ವಜನಿಕ ಹಿತಾಶಕ್ತಿ ಪರಿಸರ ಸಂರಕ್ಷಣೆ ಕೃಷಿ ಭೂಮಿ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ದೂರನ್ನು ಅತೀ ಗಂಭೀರವಾಗಿ ಪರಿಗಣಿಸಿ ಸ್ಥಳಕ್ಕೆ ಅಧಿಖಾರಿಗಳನ್ನು ಕಳುಹಿಸಿ ಸಮಗ್ರ ತನಿಖೆ ನಡೆಸಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು, ದೃಢಪಟ್ಟಲ್ಲಿ ತಕ್ಷಣವೇ ಸೂಕ್ತ ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ಕೋರುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲಿಸಿದ ಬಳಿಕ ಸೂಕ್ತ ಕ್ರಮವನ್ನು ಜರುಗಿಸುವುದಕ್ಕೆ ತಿಳಿಸಿದರು.

ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ.

ಮನವಿ ಪತ್ರದಲ್ಲಿ ಲಗ್ಗತ್ತಿಸಿರುವ ಫೋಟೋ ಹಾಗೂ ಮಾಹಿತಿಗಳನ್ನು ಗಮನಿಸಿದರೆ ಇದು ಅಧಿಕಾರಿಗಳ ದಿವ್ಯ ನಿರ್ಲಕ್ಷ ಅಥವಾ ರಾಜಕೀಯ ಒತ್ತಡ ಎಂಬುದು ಮೇಲ್ನೋಟಕ್ಕೆ ಕಂಡುಬರುತಿದೆ ಈ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಯಂತ್ರೋಪಕರಣಗಳ ಬಳಕೆ ಅಕ್ರಮ ವಿದ್ಯುತ್ ಬಳಕೆ ಮಾಡಲಾಗಿದೆ ಇನ್ನಾದರೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ILEGAL...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading