
ಹೊಸನಗರ: ತಾಲೂಕು ಒಕ್ಕಲಿಗರ ಸಂಘದಿಂದ ಜೂನ್ 28ರ ಭಾನುವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಹಾಗೂ ನವೀಕೃತಗೊಂಡ ಸಂಘದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಉಮೇಶ್ ಹಾಲಗದ್ದೆ ತಿಳಿಸಿದರು.

ಈ ಕುರಿತಾಗಿ ಮಾತನಾಡಿದ ಅವರು ಜೂನ್ 28ರ ಭಾನುವಾರ ಬೆಳಿಗ್ಗೆ 10.30 ಕ್ಕೆ ಪಟ್ಟಣದ ಮೆಸ್ಕಾಂ ಕಚೇರಿ ಮುಂಭಾಗ ಇರುವ ಒಕ್ಕಲಿಗರ ಭವನ ಕಟ್ಟಡದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮಿಗಳು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವಹಿಸಲಿದ್ದು ನವೀಕೃತ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಅಲ್ಲದೆ ಶ್ರೀ ನಾದಮಯಾನಂದನಾಥ ಸ್ವಾಮಿಗಳು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎ ಮಂಜುನಾಥ್ ಗೌಡ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಅವರು ಮನವಿಯನ್ನು ಮಾಡಿದರು.
INAUGURATION..
Discover more from Prasarana news
Subscribe to get the latest posts sent to your email.
