
ಹೊಸನಗರ: ಪಟ್ಟಣದ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಜ್ರ ಮಹೋತ್ಸವದ ಸಂಭ್ರಮ ಹಿನ್ನಲೆ ಸೆಪ್ಟೆಂಬರ್ 25ರಂದು ಸಂಘದ ನೂತನ ಕಟ್ಟಡ ಉದ್ಘಾಟನೆ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದುಮ್ಮ ವಿನಯ್ ಕುಮಾರ್ ತಿಳಿಸಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಂಘದ ಕಟ್ಟಡವನ್ನು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಲಿದ್ದಾರೆ. ಕಟ್ಟಡದ ಶಿಲಾಫಲಕವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ ಎಂದರು.
ರಸಗೊಬ್ಬರ ಉಗ್ರಾಣವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಪಡಿತರ ಹಾಗೂ ಕೃಷಿ ಉಪಕರಣಗಳ ಉಗ್ರಾಣವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು. ಸಾಮಾನ್ಯ ಸೇವಾ ಕೇಂದ್ರವನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ವೇದಿಕೆ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ್ ಗೌಡ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಅಲ್ಲದೆ ನಬಾರ್ಡ್ ಆರ್ಥಿಕ ಸಹಾಯದೊಂದಿಗೆ ಸುಮಾರು 2.41 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಮತ್ತು ಉಗ್ರನ ಜೊತೆಗೆ ಆಡಳಿತ ಕಚೇರಿಯನ್ನು ನಿರ್ಮಿಸಲಾಗಿದ್ದು ಎಂದು ತಿಳಿಸಿದರು.
ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 1947ರಲ್ಲಿ ಹಿರಿಯ ಸಹಕಾರಿಗಳ ಪರಿಶ್ರಮ ಹಾಗೂ ಆಶೀರ್ವಾದದೊಂದಿಗೆ ಸ್ಥಾಪನೆಯಾಗಿ ಇದೀಗ ಸಂಘವು ಹೊಸನಗರ ತಾಲೂಕಿನ 40 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದ್ದು, 2,678 ಸದಸ್ಯರನ್ನು ಒಳಗೊಂಡಿದೆ. ಕೃಷಿ ಕ್ಷೇತ್ರಕ್ಕೆ ಶೂನ್ಯ ಬಡ್ಡಿದರದಲ್ಲಿ ₹11.23 ಕೋಟಿಯಷ್ಟು ಸಾಲ ವಿತರಿಸಲಾಗಿದೆ. ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗಾಗಿ 1,251 ಸದಸ್ಯರಿಗೆ ಒಟ್ಟು ₹13.12 ಕೋಟಿ ಸಾಲ ಒದಗಿಸಲಾಗಿದೆ ಎಂದು ತಿಳಿಸಿದರು.
ರಸಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟದಲ್ಲಿಯೂ ಸಂಘ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯಲ್ಲಿ ಮುಂಚೂಣಿಯ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ. ವಾರ್ಷಿಕವಾಗಿ ಸುಮಾರು ₹107 ಕೋಟಿಯಷ್ಟು ವಹಿವಾಟು ನಡೆಸುತ್ತಿರುವ ಸಂಘ ಆರ್ಥಿಕವಾಗಿ ಸದೃಢವಾಗಿದೆ. 2026ರ ಅಂತ್ಯಕ್ಕೆ ₹11.31 ಲಕ್ಷ ಲಾಭ ಗಳಿಸಿದೆ ಎಂದು ಅವರು ಹೇಳಿದರು.
ಸದಸ್ಯರಿಂದ ₹8.48 ಕೋಟಿಯಷ್ಟು ಠೇವಣಿ ಸಂಗ್ರಹಿಸಲಾಗಿದ್ದು, ಸಂಘದ ಸ್ವಂತ ಬಂಡವಾಳದ ಮೂಲಕವೂ ಸದಸ್ಯರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು ಅಲ್ಲದೆ ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಆರ್.ಎಂ ಮಂಜುನಾಥಗೌಡ ಹಾಗೂ ಕಟ್ಟಡ ಮೇಲ್ಚಾವಣಿ ನಿರ್ಮಾಣಕ್ಕೆ 25 ಲಕ್ಷ ಅನುದಾನವನ್ನು ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಧನ್ಯವಾದಗಳು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿನಿರ್ದೇಶಕರಾದ ಹೆಚ್. ಶ್ರೀನಿವಾಸ್, ಮುರುಳಿಧರ ಹತ್ವಾರ್, ಚಿನ್ನಪ್ಪ, ಹೂವಪ್ಪ, ವಿರೂಪಾಕ್ಷಪ್ಪ, ಹಾಗೂ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
INAUGURATION..
Discover more from Prasarana news
Subscribe to get the latest posts sent to your email.
