
ಹೊಸನಗರ: ಸಾಹಿತ್ಯವು ಮನುಷ್ಯನ ಆಂತರಿಕ ಭಾವನೆಗಳನ್ನು ಅಕ್ಷರಗಳು ಮೂಲಕ ಹೊರ ಜಗತ್ತಿಗೆ ವ್ಯಕ್ತಪಡಿಸುವ ಅತ್ಯುತ್ತಮ ಸಾಧನವಾಗಿದೆ ಎಂದು ತಹಶೀಲ್ದಾರ್ ಭರತ್ ರಾಜ್ ತಿಳಿಸಿದರು.
ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಅವರು, ಇದೇ ಎಪ್ರಿಲ್ 24ರಂದು ನಡೆಯಲಿರುವ ತಾಲೂಕು ಮಟ್ಟದ 11ನೇ ಕಸಾಪ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಾಹಿತ್ಯ ರಚನೆ ಹಾಗು ಓದಿನಿಂದ ಪ್ರತಿಯೊಬ್ಬರ ಮನಸ್ಸು ಪ್ರಫುಲ್ಲಗೊಳುತ್ತದೆ. ಸ್ವಾತಂತ್ರ್ಯ ಸಂದರ್ಭದಲ್ಲಿ ಸಾಹಿತ್ಯವು ದೇಶಭಕ್ತಿ, ದೇಶಾಭಿಮಾನ ಹೆಚ್ಚಳಕ್ಕೆ ಕಾರಣವಾಯಿತು. ಇಂತಹ ಸಾಹಿತ್ಯ ಸಮ್ಮೇಳನವು ಪ್ರತಿಭೆಗಳ ಉಗಮಕ್ಕೆ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಹಿತ್ಯ ಸಮ್ಮೇಳನಗಳು ನಮ್ಮ ಮುಂದಿನ ಜನಾಂಗಕ್ಕೆ ಸಾಹಿತ್ಯದ ಸದಾಶಯವನ್ನು ತಿಳಿಸುವ ಮಾರ್ಗದರ್ಶಿ ಆಗಬೇಕೆಂದು ಹಿರಿಯ ಸಾಹಿತಿ ಡಾ. ಶಾಂತರಾಮ ಪ್ರಭು ತಿಳಿಸಿದರು.
ತಾಲೂಕು ಕಸಾಪ ಅಧ್ಯಕ್ಷ ಗಣೇಶ್ ಮೂರ್ತಿ ನಾಗರಕೊಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ನಿಕಟಪೂರ್ವ ಅಧ್ಯಕ್ಷ ಕೆ. ಇಲ್ಯಾಸ್, ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಚಂದ್ರಶೇಖರ ಶೇಟ್, ಕಾರ್ಯದರ್ಶಿ ಕೆ.ಜಿ.ನಾಗೇಶ್, ಉಪ ಕಾರ್ಯದರ್ಶಿ ಅಶ್ವಿನಿ ಪಂಡಿತ್, ಪ್ರಮುಖರಾದ ನಿವೃತ್ತ ಪ್ರಾಚಾರ್ಯ ಪ್ರೊ. ನವೀನ ಚಂದ್ರ, ನಿವೃತ್ತ ಕೃಷಿ ಅಧಿಕಾರಿ ಹೆಚ್.ಎಂ. ಸುಬ್ರಹ್ಮಣ್ಯ, ಆಹಾರ ನಿರೀಕ್ಷಕ ಬಾಲಚಂದ್ರ ಗೌಡ, ಪತ್ರಕರ್ತ ಕಂಠಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
INVITATION...
Discover more from Prasarana news
Subscribe to get the latest posts sent to your email.
