JATRA MAHOTSAVA:      ಜಾತ್ರಾ ಮಹೋತ್ಸವದ ಯಶಸ್ವಿ ಆಯೋಜನೆಗೆ ಅಧಿಕಾರಿಗಳು ಸಹಕಾರವನ್ನು ನೀಡಿ:ಬೇಳೂರು ಗೋಪಾಲಕೃಷ್ಣ…

ಹೊಸನಗರ: ಜನವರಿ 20 ರಿಂದ ಪ್ರಾರಂಭವಾಗಲಿರುವ ಹೊಸನಗರ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಯಶಸ್ವಿ ಆಯೋಜನೆಗೆ  ಪ್ರತಿಯೊಬ್ಬ ಅಧಿಕಾರಿಯ ಸಹಕಾರವನ್ನು ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಮಂಗಳವಾರ ಪಟ್ಟಣ ಪಂಚಾಯತ್ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಾತ್ರಾ ಮಹೋತ್ಸವ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಜಾತ್ರಾ ಕಾರ್ಯಕ್ರಮದ ಯಶಸ್ಸಿಗೆ ಹಾಗೂ ಆಯೋಜನೆಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ವಾರ್ಡ್ ಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಎಲ್ಲಾ ಕಡೆಗಳಲ್ಲಿಯೂ ಕ್ರಿಮಿನಾಶಕ ಔಷಧಿಗಳನ್ನ ಸಿಂಪಡಿಸುವ ಜೊತೆಗೆ ಜಾತ್ರಾ ಸಮಯದಲ್ಲಿ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ, ಶೌಚಾಲಯ, ವಿದ್ಯುತ್ ಪೂರೈಕೆ ರಸ್ತೆ ಗೊಂಡಿ ಗಳನ್ನ ಮುಚ್ಚುವುದು ಸಿಸಿ ಕ್ಯಾಮೆರಾ ಅಳವಡಿಕೆ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ದೇವಸ್ಥಾನದ ಸುತ್ತ ಮುತ್ತಲಿನ ಸ್ವಚ್ಛತೆಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತುರ್ತು ಸಂದರ್ಭಗಳಲ್ಲಿ ಅವಶ್ಯಕತೆ ಇರುವ ಕಡೆ ಆರೋಗ್ಯ ಸೇವೆ ಕಲ್ಪಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಭರತ್ ರಾಜ್ ,ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹರೀಶ್ ಎಂ ಏನ್ 
ಜಾತ್ರ ಸಮಿತಿ ಅಧ್ಯಕ್ಷರಾದ ದತ್ತಾತ್ರೇಯ ಎಚ್ ಎಲ್, ಕಾರ್ಯದರ್ಶಿ, ಸುನಿಲ್ ಕುಮಾರ್, ಸಮಿತಿಯ ಸದಸ್ಯರಾದ ಮನೋಹರ್, ಗಿರೀಶ್ ರಾವ್, ನಿತ್ಯಾನಂದ, ಗೋಪಿ,ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣಕ್ಕಿ  ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು...

JATRA MAHOTSAVA...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading