

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಆರ್ಭಟ ದಿನೇ ದಿನೆ ಹೆಚ್ಚಾಗುತ್ತಿದ್ದು, ಬುಧವಾರ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 12 ರಿಂದ ಜೂನ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಕೊಟ್ಟಿದೆ. ಬೆಳಗಾವಿ, ಧಾರವಾಡ, ಗದಗದಲ್ಲೂ ಜೂ.12ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್ ಇರಲಿದೆ...
KARNATAKA RAIN..
Discover more from Prasarana news
Subscribe to get the latest posts sent to your email.