KODACHADRI:ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿ.. ಹೃದಯಘಾತಕ್ಕೆ ಬಲಿ.

ಹೊಸನಗರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ಪ್ರವಾಸಿಗ ಉಲ್ಲಾಸ 30 ವರ್ಷ ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಕ್ಕೆಂದು ಬಂದ ಸಂದರ್ಭದಲ್ಲಿ ಬೆಟ್ಟದ ಸರ್ವಜ್ಞ ಪೀಠದಿಂದ ಇಳಿಯುವಾಗ ಲಘು ಹೃದಯಘಾತವಾಗಿದೇ ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ತರುವ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.


ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. ಮೃತರ ಮೃತ ದೇಹವನ್ನು ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೇ..

KODACHADRI..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading