
ಹೊಸನಗರ: ಜೀವಿತ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಇನ್ನು ಸರ್ಕಾರದಿಂದ ಅಧಿಕೃತ ದಿನಾಂಕ ನಿಗದಿಯಾಗಿಲ್ಲ ಎಂದು ಹೊಸನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚಿದಂಬರ ಹೂವಿನ ಕೊನೆ ಸ್ಪಷ್ಟನೆ ನೀಡಿದ್ದಾರೆ.
ತಾಲೂಕಿನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ಸುದ್ದಿ ಹಿನ್ನೆಲೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲ ಸಭೆಯಲ್ಲಿ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣ ಪತ್ರ (Life Certificate) ಸಲ್ಲಿಕೆ ಕಡ್ಡಾಯಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮೃತಪಟ್ಟವರ ಖಾತೆಗೆ ಹಣ ಜಮಾ ಆಗುವುದನ್ನು ತಡೆಯಲು ಮತ್ತು ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಈ ಹೊಸ ನಿಯಮ ಜಾರಿಗೆ ತರುತ್ತಿದೆ ಆದರೆ ಅರ್ಜಿ ಸಲ್ಲಿಕೆಗೆ ಅಧಿಕೃತ ದಿನಾಂಕವನ್ನು ಇನ್ನು ನಿಗದಿಪಡಿಸಿಲ್ಲ ನಿಗದಿಯಾದ ಬಳಿಕ ಪ್ರತಿಯೊಬ್ಬ ಗೃಹಲಕ್ಷ್ಮಿ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಯಾವುದೇ ಫಲಾನುಭವಿಗಳು ಗೊಂದಲಕ್ಕೆ ಗಿಡಾಗಬಾರದು ಎಂದು ತಿಳಿಸಿದರು.
ಅಲ್ಲದೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಪಂಚ ಗ್ಯಾರಂಟಿಗಳನ್ನು ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಬ್ಬ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದು ಸಮಿತಿಯ ಸದಸ್ಯರಿಗೆ ಅವರ ಕಾರ್ಯ ವ್ಯಾಪ್ತಿಗೆ ಹೊಂದಿಕೆಯಾಗುವಂತೆ ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯನ್ನ ಈ ಸಂದರ್ಭದಲ್ಲಿ ವಹಿಸಿದರು.
ಅಲ್ಲದೆ ಸರ್ಕಾರದಿಂದ ನೀಡಲಾದ ಪಡಿತರ ಹಕ್ಕಿಗಳನ್ನು ಸಂಗ್ರಹಿಸಿಡುವ ಗೋಧಾಮಗಳಲ್ಲಿ ಸ್ವಚ್ಛತೆಯ ಕೊರತೆ ಹೆಚ್ಚಿದ್ದು ಈ ಬಗ್ಗೆ ದೂರು ಬಂದ ಹಿನ್ನೆಲೆ ಅಧಿಕಾರಿಗಳಿಗೆ ಪ್ರತಿ ಗೋಧಾಮು ಗಳನ್ನ ಪರಿಶೀಲಿಸಿ ಸ್ವಚ್ಛತ್ತೆ ಇಂದ ಇಡದವರ ವಿರುದ್ಧ ಸೂಕ್ತ ಕ್ರಮವನ್ನು ಜರುಗಿಸುವಂತೆ ಸೂಚಿಸಿದರು.
ಹಾಗೆಯೇ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಅಧಿಕಾರಿಯು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನಿರ್ವಹಿಸುತ್ತಿರುವ ಕೆಲಸಗಳ ಕುರಿತು ಸಭೆಗೆ ಪ್ರತಿಬಾರಿಯೂ ಮಾಹಿತಿಯನ್ನು ನೀಡುವಂತೆ ತಿಳಿಸಿದರು .
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್ ಸಮಿತಿಯ ಸದಸ್ಯರಾದ ನರಸಿಂಹ ಪೂಜಾರಿ
ಸಿಂತ್ಯಾ ಸೆರವೊ, ಸುಮಂಗಲ ದೇವರಾಜ್,ಅಕ್ಷತಾ ನಾಗರಾಜ್, ಪೂರ್ಣಿಮಾ,ಸಂತೋಷ್ ಮಳವಳ್ಳಿ,ಅನಿಲ್ ಕುಮಾರ್ ಏನ್ ಟಿ,ಕರುಣಾಕರ. ಅಮೀರ್ ಹಮ್ಜಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
MEETING
Discover more from Prasarana news
Subscribe to get the latest posts sent to your email.
