

ಹೊಸನಗರ:ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು, ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಉಲ್ಲೇಖದ ಟಿಪ್ಪಣಿಯಲ್ಲಿ ನಿರ್ದೇಶನ ನೀಡಲಾಗಿರುತ್ತದೆ.
ಉಲ್ಲೇಖದಲ್ಲಿ ನೀಡಲಾದ ನಿರ್ದೇಶನದನ್ವಯ ದಿನಾಂಕ: 21-04-2025 ಸೋಮವಾರ ರಂದು ಶ್ರೀ ಎಸ್ ಮಧು ಬಂಗಾರಪ್ಪ, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ಸರ್ಕಾರ ನೇತೃತ್ವದಲ್ಲಿ ಬೆಳಿಗ್ಗೆ 9:30ಕ್ಕೆ ಈಡಿಗ ಸಭಾಭವನ ಹೊಸನಗರದಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ..
MINISTER IN CHARGE..
Discover more from Prasarana news
Subscribe to get the latest posts sent to your email.