NAXALITE:SURRENDER: ನಕ್ಸಲ್ ಡ್ರೆಸ್ ಸಿಎಂ ಗೆ ನೀಡುವ ಮೂಲಕ ಶರಣಾದ ಆರು ಮಂದಿ ನಕ್ಸಲರು…

ಬೆಂಗಳೂರು: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಬುಧವಾರ ಶರಣಾಗತ ರಾಗಿದ್ದಾರೆ. ಈ ಮೂಲಕ ಶಸ್ತ್ರಾಸ್ತ್ರ ಹೋರಾಟಕ್ಕೆ ಅಂತ್ಯ ಹಾಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಾರ್ಯಾಚರಿಸಿ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ 6 ಮಂದಿ ನಕ್ಸಲರಾದ ಚಿಕ್ಕಮಗಳೂರು ಜಿಲ್ಲೆಯ ಲತಾ ಮುಂಡಗಾರು, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಕುತ್ಲೂರು, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ, ರಾಯಚೂರಿನ ಮಾರೆಪ್ಪ ಅರೋಲಿ, ಕೇರಳ ವಯನಾಡಿನ ಜಿಶಾ, ತಮಿಳುನಾಡು ವೆಲ್ಲೂರಿನ ಕೆ. ವಸಂತ್‌ ಬುಧವಾರ ಬೆಳಗ್ಗೆ ನಕ್ಸಲ್‌ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಶರಣಾಗುವುದಾಗಿ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಹಂತದ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿದರು..

ಇತರ ರಾಜ್ಯದಲ್ಲಿ ನಕ್ಸಲ್‌ ಚಟುವಟಿಕೆಯಲ್ಲಿರುವವರೂ ಮುಖ್ಯವಾಹಿನಿಗೆ ಬರಬಹುದು ಎಂಬ ಸದುದ್ದೇಶದಿಂದ ಕಡೇ ಕ್ಷಣದಲ್ಲಿ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಬಂದು ಶರಣಾಗಲು ಜಿಲ್ಲಾಧಿಕಾರಿ ಹಾಗೂ ಪೊಲೀಸರು ನಕ್ಸಲರ ಜತೆಗೆ ಚರ್ಚೆ ನಡೆಸಿ ಬಳಿಕ ಅವರನ್ನು ಚಿಕ್ಕಮಗಳೂರಿನಿಂದ ಹಾಸನ ಮಾರ್ಗವಾಗಿ ಸಂಜೆ 6 ಗಂಟೆಗೆ ಸಿಎಂ ಗೃಹ ಕಚೇರಿಗೆ ಕರೆತಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹಸಚಿವ ಡಾಣ ಜಿ. ಪರಮೇಶ್ವರ್‌ ಸೇರಿದಂತೆ ಕೆಲವು ಸಚಿವರ ಸಮ್ಮುಖದಲ್ಲಿ 6 ನಕ್ಸಲರು ಶರಣಾದರು. ಈ ಶರಣಾಗತಿಯಿಂದ 4 ದಶಕಗಳ ಬಳಿಕ ಕರ್ನಾಟಕ ನಕ್ಸಲ್‌ ಮುಕ್ತ ಆಗುವ ಮುನ್ನುಡಿ ಬರೆದಿದೆ .

NAXALITE:SURRENDER


Discover more from Prasarana news

Subscribe to get the latest posts sent to your email.

  • Related Posts

    STATE FILAM AWARD: ಹೊಸನಗರದ ‘ಗಾರ್ಗಿ ಕಾರೆಹಕ್ಲು’ರವರಿಗೆ, 2020 ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ’

    ಹೊಸನಗರ: 2020 ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ಪರ್ಜನ್ಯ’ ಸಿನಿಮಾದ “ಮೌನವು ಮಾತಾಗಿದೆ” ಹಾಡಿನ ಗೀತೆ ರಚನೆಗೆ ಗಾರ್ಗಿ ಕಾರೆ ಹಕ್ಲು ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ. ಗಾರ್ಗಿ ಕಾರೆಹಕ್ಲುರವರು ಮೂಲತಹ ಹೊಸನಗರ ತಾಲ್ಲೂಕಿನ ಸಂಪೆಕಟ್ಟೆಯವರಾಗಿದ್ದು, ಸಾಹಿತ್ಯದಲ್ಲಿ ಸ್ನಾತಕೋತ್ತರ…

    Read more

    AIR FORCE:ಪ್ಯಾರಾಚೂಟ್ ಅಪಘಾತ…ಹೊಸನಗರ ಮೂಲದ ವಾಯುಪಡೆ ಅಧಿಕಾರಿ ಮಂಜುನಾಥ್ ನಿಧನ…..

    ಆಗ್ರಾ: ಶುಕ್ರವಾರ ಆಗ್ರಾದಲ್ಲಿ ನಡೆದ ಪ್ಯಾರಾಚೂಟ್ ತರಬೇತಿ ವೇಳೆ ಕರ್ನಾಟಕ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ವಾರಂಟ್ ಅಧಿಕಾರಿ ಮಂಜುನಾಥ್, ವಿಂಗ್ ಕಮಾಂಡರ್ ರೋಹಿತ್ ದಹಿಯಾ ಸೇರಿದಂತೆ 12 ತರಬೇತಿದಾರರು ಬೆಳಿಗ್ಗೆ 8:30ಕ್ಕೆ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading