PATTANA PANCHAYAT: ಪೌರಕಾರ್ಮಿಕ ದಿನಾಚರಣೆ ಪ್ರಯುಕ್ತ ಪೌರಕಾರ್ಮಿಕರಿಗೆ ಕ್ರೀಡಾಕೂಟ..

ಹೊಸನಗರ: ಪೌರಕಾರ್ಮಿಕರ ದಿನಾಚರಣೆ-2025 ಹಿನ್ನೆಲೆಯಲ್ಲಿ ಹೊಸನಗರ ಪಟ್ಟಣ ಪಂಚಾಯತ್ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಪೌರಕಾರ್ಮಿಕರಿಗಾಗಿ ಶುಕ್ರವಾರ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಪೌರಕಾರ್ಮಿಕರು, ನೀರು ಸರಬರಾಜು ಸಿಬ್ಬಂದಿ ವರ್ಷಪೂರ್ತಿ ಬಿಡುವಿಲ್ಲದೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗದಂತೆ ಪಟ್ಟಣ ಸ್ವಚ್ಛತೆ ಮತ್ತು ನೀರು ಸರಬರಾಜು ಕಾಯಕದಲ್ಲಿ ತೊಡಗಿಕೊಳ್ಳುತ್ತಾರೆ. ಇದರಿಂದ ಸದಾ ಒತ್ತಡದಲ್ಲಿ ಅವರು ಕೆಲಸ ನಿರ್ವಹಿಸುತ್ತಾರೆ. ಹೀಗಾಗಿ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಚೇರಿ ಸಿಬ್ಬಂದಿಯನ್ನು ಒಳಗೊಂಡಂತೆ ಕ್ರೀಡಾಕೂಟ ಆಯೋಜಿಸಲಾಗಿದೆ. ಇದರಿಂದ ಕಾರ್ಮಿಕರ ಮನಸ್ಸು ಕೊಂಚ ಹಗುರವಾಗುತ್ತದೆ. ಜತೆಗೆ ಕ್ರೀಡೆ ಮಾನಸಿಕ ಬಲವನ್ನು ವೃದ್ಧಿಗೊಳಿಸುತ್ತದೆ. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಮುಂದಿನ ದಿನಗಳಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು. ಬಳಿಕ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹರೀಶ್ ಎಂ ಎನ್ ವಿವಿಧ ಕ್ರೀಡೆಗಳಿಗೆ ಚಾಲನೆಯನ್ನು ನೀಡಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಚಂದ್ರಕಲಾ ಸದಸ್ಯ ಸಿಂತೀಯ ಸೆರಾವು, ಪೌರಕಾರ್ಮಿಕ ಸಂಘದ ಅಧ್ಯಕ್ಷ ನಾಗಪ್ಪ ಪಟ್ಟಣ ಪಂಚಾಯತ್ ಸಿಬ್ಬಂದಿಗಳಾದ ನೇತ್ರಾವತಿ.ಪರಶುರಾಮ್.ಗಿರೀಶ್. ನವೀನ್,ಬಸವರಾಜ್. ಅಸ್ಮಾ ಬಾನು. ಶೃತಿ. ಮಂಜುನಾಥ್ ಮುಖಂಡರಾದ ರಾಧಿಕಾ ರತ್ನಾಕರ್.ಗುರು ಜಯನಗರ ಹಾಗೂ ಪೌರಕಾರ್ಮಿಕರು ಭಾಗಿಯಾಗಿದ್ದರು.

PATTANA PANCHAYAT..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading