Flash News

PEACE MEETING:ಹೊಸನಗರದಲ್ಲಿ ಗಣೇಶೋತ್ಸವ ಶಾಂತಿ ಸಭೆ; ನಿಯಮ ಪಾಲನೆಗೆ ಎ ಎಸ್‌ ಪಿ ಭಾನುಪ್ರಕಾಶ್ ಸೂಚನೆ.

ಹೊಸನಗರ:ಹೊಸನಗರವು ಭಾವೈಕ್ಯತೆಯ ಪರಂಪರೆಯಂತೆ ಇಲ್ಲಿನ ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಯವರು ಇಲಾಖೆ ಸೂಚಿಸಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಎಎಸ್ಪಿ ಭಾನುಪ್ರಕಾಶ್ ತಿಳಿಸಿದರು.
ತಾಲೂಕು ಪಂಚಾಯತ್ ಆವರಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಗಣೇಶೋತ್ಸವ ಶಾಂತಿ ಸಭೆ, ಉದ್ದೇಶಿಸಿ ಮಾತನಾಡಿದ ಅವರು ಗಣೇಶೋತ್ಸವ ಸಮಯದಲ್ಲಿ ಪೊಲೀಸ್ ಇಲಾಖೆಗೆ ಎಷ್ಟು ಜವಾಬ್ದಾರಿ ಇರುತ್ತದೆಯೋ ಪ್ರತಿಯೊಂದು ಗಣೇಶೋತ್ಸವ ಸಮಿತಿಗೆ ಅಷ್ಟೇ ಜವಾಬ್ದಾರಿ ಇರುತ್ತದೆ ಹೊಸನಗರದಲ್ಲಿ ಗಣೇಶೋತ್ಸವ ಸಮಯದಲ್ಲಿ ಈವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂಬ ಮಾಹಿತಿ ಇದೆ ಮುಂದೆಯೂ ಸಹ ಇದೇ ರೀತಿಯಲ್ಲಿ ಪ್ರತಿಯೊಂದು ಸಮಿತಿಯು ಜವಾಬ್ದಾರಿತವಾಗಿ ಕಾನೂನು ಬದ್ಧವಾಗಿ ಗಣೇಶೋತ್ಸವ ಕಾರ್ಯಕ್ರಮವನ್ನು ನಡೆಸಿಕೊಂಡು ಹೋಗಬೇಕು ಈ ನಿಟ್ಟಿನಲ್ಲಿ ಇಲಾಖೆ ನಿಮಗೆ ಸಂಪೂರ್ಣವಾದ ಸಹಕಾರವನ್ನು ನೀಡಲಿದೆ ಎಂದರು ನಿಗದಿತ ಸಮಯಕ್ಕಿಂತ ಹೆಚ್ಚಿನ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದು ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುವುದು ಇಂಥವುಗಳು ಆಗದಂತೆ ಸಮಿತಿ ನಿಗ ವಹಿಸಬೇಕು ಜೊತೆಯಲ್ಲಿ ವಿಸರ್ಜನೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಗೊಂದಲಗಳು ಸೃಷ್ಟಿಯಾದ್ದಲ್ಲಿ ಯಾರು ಸಹ ಕಾನೂನನ್ನ ಕೈಗೆತ್ತಿಕೊಳ್ಳದೆ ಪೊಲೀಸ್ ಇಲಾಖೆಯ ಅಥವಾ ಅಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಗಮನಕ್ಕೆ ತರಬೇಕು ಅದನ್ನು ಹೊರತಾಗಿ ತಾವೇ ಅದನ್ನ ನಿಯಂತ್ರಿಸುವುದು ಅಥವಾ ಗೊಂದಲಕ್ಕೆ ಎಡೆ ಮಾಡಿಕೊಡುವುದು ಉಂಟಾದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದರು.ಅಲ್ಲದೆ
ಸುಪ್ರೀಂಕೋರ್ಟ್ ಆದೇಶದನ್ವಯ ಕರ್ಕಶ ಶಬ್ದ ಮಾಡುವ ಡಿಜೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ನಿಯಮಾನುಸಾರ ಧ್ವನಿವರ್ಧಕ ಬಳಸಲು ಅವಕಾಶವಿದೆ. 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು. ಇದರ ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಅನ್ಯ ಧರ್ಮೀಯರ ವಿರುದ್ಧ ಪ್ರಚೋದನಾಕಾರಿ ಸಂದೇಶಗಳನ್ನು ಹಂಚಿಕೊಳ್ಳುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಖಡಕ್‌ ಎಚ್ಚರಿಕೆ ನೀಡಿದರು.
ಈ ಸಂದರ್ಬದಲ್ಲಿ ತಹಶೀಲ್ದಾರ್ ಭರತ್ ರಾಜ್ ಸಿಪಿಐ ಗೌಡಪ್ಪಗೌಡ, ಪಿಎಸ್ಐ ಸಂತೋಷ್ ಬಾಗೋಜಿ, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹರೀಶ್ ಎಮ್ ಎನ್ ವಿವಿಧ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

PEACE MEETING..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading