
ಹೊಸನಗರ ; ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ.
ಗ್ರಾಮದ ನವೀನ್ ಎಂಬುವರು ತಾವು ಸಾಕಿದ ಗೋವನ್ನ ಮೇಯಲು ಬಿಟ್ಟಿದ್ದು ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವುದಾಗಿ ವಿಷಯ ತಿಳಿಸಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿ ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ಹಸುವಿನ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದ್ದು ಯಾರೋ ದನದ ಕೆಚ್ಚಲು ಕೊಯ್ದಿರುವ ಬಗ್ಗೆ ಅನುಮಾನ ಬಂದಿದೆ. ನಂತರ ಗ್ರಾಮಸ್ಥರ ಸಹಾಯದಿಂದ ದನವನ್ನು ಮನೆಗೆ ಕರೆತಂದು ಪಶು ವೈದ್ಯರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಸಂತ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ...
PERVERSION...
Discover more from Prasarana news
Subscribe to get the latest posts sent to your email.
