PRASARANANEWS:ಸಂಸತ್ತಿನಲ್ಲಿ ಮಲೆನಾಡಿನ ಜನರ ಧ್ವನಿಯಾದ ಸಂಸದರಿಗೆ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ: ಕರುಣಾಕರ ಶೆಟ್ಟಿ. ..

ಹೊಸನಗರ: ವಿಶೇಷ ಸಂಸತ್ ಅಧಿವೇಶನದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು, ಕ್ಷೇತ್ರ ಪುನರ್ ವಿಂಗಡಣೆ ಕುರಿತು ಮಲೆನಾಡಿನ ಜನರ ಧ್ವನಿಯಾಗಿ ಅಧಿವೇಶನದಲ್ಲಿ ಮಾತನಾಡಿದ್ದು ಅದರಲ್ಲಿಯೂ ಕ್ಷೇತ್ರ ಮರುಸ್ಥಾಪನ ಹೋರಾಟ ಪಾದಯಾತ್ರೆ ಯ ಕಾರ್ಯಕ್ರಮದ ಸಭೆಯಲ್ಲಿ ನುಡಿದ ಮಾತಿನಂತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿ ಪುನರ್ ಸ್ಥಾಪಿಸಬೇಕೆಂಬ ಅಲ್ಲಿನ ಜನರ ದಶಕಗಳ ಬೇಡಿಕೆ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಈ ಭಾಗದ ಭೌಗೋಳಿಕ ವ್ಯಾಪ್ತಿ ಮತ್ತು ಸವಾಲುಗಳನ್ನು ಪರಿಗಣಿಸಿ, ಮುಂಬರುವ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ, ಈಶಾನ್ಯ ರಾಜ್ಯಗಳಿಗೆ ನೀಡಿರುವಂತೆ, ಪಶ್ಚಿಮ ಘಟ್ಟದ ಹೊಸನಗರಕ್ಕೂ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅವರಿಗೆ ಈ ಭಾಗದ ಪ್ರತಿಯೊಬ್ಬ ಜನತೆಯ ಪರವಾಗಿ ಧನ್ಯವಾದಗಳು ತಿಳಿಸುತ್ತೇನೆ ಎಂದು ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಶೆಟ್ಟಿ ತಿಳಿಸಿದರು. ಈ ಕುರಿತಾಗಿ ಮಾತನಾಡಿದ ಅವರು
ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕಾಗಿ ಆಗ್ರಹಿಸಿ, ಇತ್ತೀಚಿಗೆ ಪೂಜ್ಯ ಮೂಲೆಗದ್ದೆ ಶ್ರೀಗಳ ನೇತೃತ್ವದಲ್ಲಿ  ಹೊಸನಗರದಲ್ಲಿ ನಡೆದ ಬೃಹತ್ ಪಾದಯಾತ್ರೆಯನ್ನು ಉಲ್ಲೇಖಿಸಿದ ಸಂಸದ ರಾಘವೇಂದ್ರ, “ಸ್ವತಂತ್ರ ಅಸ್ತಿತ್ವ ಹೊಂದಿದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು 2008ರಲ್ಲಿ ವಿಭಜಿಸಲಾಗಿದ್ದು, ಆ ಭಾಗದ ಜನರಿಗೆ ಪ್ರಾತಿನಿಧ್ಯದ ಕೊರತೆಯನ್ನುಂಟು ಮಾಡಿದೆ. ಶರಾವತಿ, ವಾರಾಹಿಯಂತಹ ನದಿಗಳ ಮೂಲವಾಗಿರುವ, ಮಲೆನಾಡಿನ ಕಠಿಣ ಭೂಪ್ರದೇಶ ಹೊಂದಿರುವ ಹೊಸನಗರಕ್ಕೆ ವಿಶೇಷ ಭೌಗೋಳಿಕ ಮಾನ್ಯತೆ ನೀಡಬೇಕು. ನಾಡಿನ ಅಭಿವೃದ್ಧಿಗಾಗಿ ಐದು ಜಲಾಶಯ ಯೋಜನೆಗಳಿಗೆ ಭೂಮಿ ನೀಡಿ ತ್ಯಾಗ ಮಾಡಿರುವ ಸಂತ್ರಸ್ತ ಕುಟುಂಬಗಳ ಹಿತದೃಷ್ಟಿಯಿಂದ ಹೊಸನಗರವನ್ನು ಮತ್ತೆ ಸ್ವತಂತ್ರ ಕ್ಷೇತ್ರವನ್ನಾಗಿ ಮಾಡುವುದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ, ಅದು ಆ ಭಾಗದ ಜನರ ತ್ಯಾಗಕ್ಕೆ ನೀಡುವ ನ್ಯಾಯ ಮತ್ತು ಗೌರವ” ಎಂದು ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಾತನಾಡಿದ್ದಾರೆ.
ಅಲ್ಲದೆ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆಯಲ್ಲಿ ಪಶ್ಚಿಮ ಘಟ್ಟದ ಮಲೆನಾಡಿನಂತಹ ವಿಶಾಲ ಅರಣ್ಯ, ಗಿರಿ-ಪರ್ವತಗಳ ಪ್ರದೇಶ ಹಾಗೂ ಕಡಿಮೆ ಜನಸಂಖ್ಯೆ ಹೊಂದಿರುವ ಭಾಗಗಳಿಗೆ, ಈಶಾನ್ಯ ರಾಜ್ಯಗಳ ಮಾದರಿಯಲ್ಲಿ ವಿಶೇಷ ಮಾನದಂಡಗಳನ್ನು ಅನುಸರಿಸಬೇಕು ಎಂದು ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಅಲ್ಲದೆ ಮುಂದಿನ ದಿನಗಳಲ್ಲಿಯೂ ಸಹ ಕ್ಷೇತ್ರ ಹೋರಾಟದಲ್ಲಿ ತಮ್ಮ ಸಂಪೂರ್ಣ ಬೆಂಬಲ ನಿರೀಕ್ಷೆಯಲ್ಲಿ ಕ್ಷೇತ್ರದ ಪ್ರತಿಯೊಬ್ಬ ಮತದಾರರಿದ್ದು ಹೀಗೆ ನಿಮ್ಮ ಸಹಕಾರ ಕ್ಷೇತ್ರ ಹೋರಾಟದಲ್ಲಿರಲಿ ಎಂದು ಮನವಿಯನ್ನು ಮಾಡಿದರು.

PRASARANANEWS..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading