
ಹೊಸನಗರ: ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಮತ್ತು ಅದನ್ನ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಶಿವಮೊಗ್ಗ ತಾಲೂಕು ಪಂಚಾಯತ್ ಹೊಸನಗರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾ ಅಧಿಕಾರಿಗಳ ಕಚೇರಿ ಹೊಸನಗರ ಮತ್ತು ಪಿ ಎಂ ಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಹೊಸನಗರ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆಯೋಜನೆಯನ್ನ ಶಾಲಾ ಅಭಿವೃದ್ಧಿ ಸಮಿತಿ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಬಹುಮಾನವನ್ನು ಗೆಲ್ಲುವ ಹುರೂಪಿನಲ್ಲಿ ಬಂದಿದ್ದೀರಿ ನಿಮ್ಮೆಲ್ಲರಿಗೂ ಶುಭಾಶಯಗಳು ಎಂದರು. ಹಾಗೆಯೆ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಆಗಮಿಸಿದ ತೀರ್ಪುಗಾರರು ಕೇವಲ ಮಕ್ಕಳ ಪ್ರತಿಭೆಯನ್ನು ಗುರುತಿಸಿ ತೀರ್ಪನ್ನ ನೀಡುವ ಕೆಲಸವನ್ನು ಮಾಡಬೇಕು ಇಲ್ಲಿ ವಿದ್ಯಾರ್ಥಿ ಗಳಾಗಲಿ ಶಾಲೆ ಯಾಗಲಿ ಮುಖ್ಯವಲ್ಲ ಬದಲಿಗೆ ಇದರಲ್ಲಿ ಪಾಲ್ಗೊಂಡ ವಿದ್ಯಾರ್ಥಿಯ ಪ್ರತಿಭೆ ಮುಖ್ಯವಾಗಿರುತ್ತದೆ ಎಂದರು.
ಜೊತೆಗೆ ಅತ್ಯಂತ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಈ ಈ ಶಾಲೆಯಲ್ಲಿ ಈಗಾಗಲೇ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಇನ್ನು ಅಗತ್ಯವಿರುವ ಕೆಲಸಗಳ ಮಾಹಿತಿಯನ್ನು ನನಗೆ ನೀಡಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲಾ ಕೆಲಸವನ್ನು ನಾನು ಮಾಡಿಕೊಡಲಿದ್ದೇನೆ ಎಂದು ಭರವಸೆಯನ್ನು ನೀಡಿದರು ಜೊತೆಗೆ ಶಾಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ಇಲ್ಲಿ ಓದಿರುವಂತಹ ಉನ್ನತ ಹುದ್ದೆಗಳನ್ನು ಹೊಂದಿರುವಂತಹ ಹಳೆಯ ವಿದ್ಯಾರ್ಥಿಗಳು ಕೈಜೋಡಿಸಿದಲ್ಲಿ ಸರ್ಕಾರಿ ಶಾಲೆಗಳನ್ನ ಇನ್ನಷ್ಟು ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ ಇದಕ್ಕೆ ಶಾಲಾ ಅಭಿವೃದ್ಧಿ ಸಮಿತಿ ಒಂದಿಷ್ಟು ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವರನ್ನು ಸನ್ಮಾನಿಸಲಾಯಿತು ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಮೇಶ್ ನೆರ್ಲೆ, ತಾಲೂಕು ಕಾ ರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಬಂಡಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಹೆಚ್ ಆರ್ ಸುರೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರವೀಣ್ ಜಿ ಎನ್, ಡಿ ವಿ ಆರ್ ವಿನಯ್, ಬಾಗರುಕುಂ ಸಮಿತಿ ಸದಸ್ಯ ಸಾಕಮ್ಮ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
PRATIBHA KARANJI..
Discover more from Prasarana news
Subscribe to get the latest posts sent to your email.
