
ಹೊಸನಗರ: ತಾಲೂಕಿನ ಮುಂಬಾರು ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಮಾರ್ ಏನ್
ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಂಬಾರು ಕ್ಷೇತ್ರದಿಂದ ಅಧ್ಯಕ್ಷ ಸ್ಥಾನಕ್ಕೆ ಕುಮಾರ್ ಎನ್ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು ಹೀಗಾಗಿ ಚುನಾವಣಾ ಅಧಿಕಾರಿ ನಟರಾಜ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಎಂಟು ಸದಸ್ಯ ಬಲವುಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಐದು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಆಯ್ಕೆ ಪ್ರಕ್ರಿಯೆ ಘೋಷಣೆಯ ಬಳಿಕ ಮಾತನಾಡಿದ ನೂತನ ಅಧ್ಯಕ್ಷರಾದ ಕುಮಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ.ಪಕ್ಷ ಬೇಧವಿಲ್ಲದೆ ಗ್ರಾಮಸ್ಥರ ಪರವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದರು ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಕರ್ತರಾದ ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಮೌಳಿ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಿನಿ, ಸದಸ್ಯರಾದ ಮಾಲತಿ ಜೆ, ಸುವರ್ಣ, ಅನ್ನಪೂರ್ಣ, ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ, ಕೃಷ್ಣಮೂರ್ತಿ, ತಿಮ್ಮಪ್ಪ, ಲೋಕ ನಾಯಕ್, ಚಂದ್ರಶೇಖರ್, ಲೇಖನ್ ಮೂರ್ತಿ, ಮುಂತಾದವರು ಉಪಸ್ಥಿತರಿದ್ದರು.
PRESIDENT.
Discover more from Prasarana news
Subscribe to get the latest posts sent to your email.
