
ಹೊಸನಗರ: ತಾಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಒಕ್ಕೂಟದ ಅಧ್ಯಕ್ಷರಾಗಿ ಹೊಸನಗರ ಪಿ ಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ನೇರಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ರಮೇಶ್ ನೇರಲೆ ಸರ್ಕಾರಿ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಒಂದು ಒಕ್ಕೂಟ ವಾಗಿರುವ ಈ ಸಮಿತಿ ಹಲವು ಉದ್ದೇಶಗಳನ್ನು ಇಟ್ಟುಕೊಂಡು ರಚಿಸಲಾಗಿದ್ದು ಈ ಒಕ್ಕೂಟವು ಸರ್ಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿಗೆ ಪೂರಕವಾಗಿ ಕಾರ್ಯವನ್ನ ನಿರ್ವಹಿಸಲಿದೆ ಎಂದರು ಒಕ್ಕೂಟವು ಸದೃಢ ಎಸ್ ಡಿ ಎಂ ಸಿ ಹಾಗೂ ಅದರ ಸದಸ್ಯರಿಗೆ ತರಬೇತಿ ಜೊತೆಗೆ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಕೊರತೆ (ಕಟ್ಟಡ, ಶೌಚಾಲಯ, ಕುಡಿಯುವ ನೀರು ಪಠ್ಯ ಪುಸ್ತಕ) ಮುಂತಾದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಅಲ್ಲದೆ ವಿವಿಧ ಶಾಲೆಗಳ ಉತ್ತಮ ಕಾರ್ಯವೈಖರಿ ಮತ್ತು ಅಭಿವೃದ್ಧಿ ಮಾದರಿಗಳನ್ನು ಪರಸ್ಪರ ಹಂಚಿಕೊಳ್ಳುವುದು. ಮಕ್ಕಳ ದಾಖಲಾತಿ ಹೆಚ್ಚಿಸುವುದು ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದು ಹಾಗೆಯೇ ಸರ್ಕಾರಿ ಶಾಲೆಗಳ ಉಳಿವು ಮತ್ತು ಸರ್ಕಾರದ ಸೌಲಭ್ಯಗಳು ಸರಿಯಾಗಿ ತಲುಪುವಂತೆ ಮೇಲ್ವಿಚಾರಣೆ ಮಾಡುವುದು ಹೀಗೆ ಇನ್ನು ಹಲವಾರು ಉದ್ದೇಶಗಳನ್ನೊಳಗೊಂಡು ಒಕ್ಕೂಟ ರಚನೆಯಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಯದರ್ಶಿ ಹಾಗೂ ಇನ್ನಿತರೆ ಜವಾಬ್ದಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
PRESIDENT..
Discover more from Prasarana news
Subscribe to get the latest posts sent to your email.
