
ಹೊಸನಗರ: ಪಟ್ಟಣದ ಸೀತಾರಾಮಚಂದ್ರ
ಸಭಾಭವನದಲ್ಲಿ ಜು.30ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕು ಶಾಖೆಯ ಅಧ್ಯಕ್ಷ ನಾ ರವಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಾಧಕರಿಗೆ ಸನ್ಮಾನಿಸಲಿದ್ದಾರೆ. ಪತ್ರಿಕಾ ವಿತರಕರಿಗೆ ಶಿಮುಲ್ ಅಧ್ಯಕ್ಷ ಎಚ್.ಎನ್.ವಿದ್ಯಾಧರ್ ಗೌರವಿಸಲಿದ್ದಾರೆ. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್. ಚಿದಂಬರ್, ಜಿಲ್ಲಾ ಕಾನಿಪ ಸಂಘದ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಂಘದ ನಿರ್ದೇಶಕ ಎನ್. ರವಿಕುಮಾರ್, ಕೆ.ವಿ.ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ, ಸತ್ಯನಾರಾಯಣ ಮುಖ್ಯ ಅತಿಥಿಗಳಾಗಿ ಬಾಗವಹಿಸಲಿದ್ದು ಜೊತೆಗೆ ಶ್ರೀ ವ್ಯಾಸಮಹರ್ಷಿ ಶಾಸ್ತ್ರೀಯ ಸಂಗೀತ & ನೃತ್ಯ ಗುರುಕುಲ, ಬಟ್ಟೆಮಲ್ಲಪ್ಪ ಇವರಿಂದ...
ಗಾನ.. ನೃತ್ಯ.. ವೈಭವ.. ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
PRESS DAY..
Discover more from Prasarana news
Subscribe to get the latest posts sent to your email.
