PROTEST:ಮನರೇಗಾ ಹೆಸರು ಬದಲು:ಹೊಸನಗರ ಬ್ಲಾಕ್ ಕಾಂಗ್ರೆಸ್‌ ಪ್ರತಿಭಟನೆ.

ಹೊಸನಗರ:ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಿಸಿ ವಿಬಿ ಜಿ ರಾಮ್‌ ಜಿ ಎಂದು ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕ್ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜಿ ಚಂದ್ರ ಮೌಳಿ ಮಾತನಾಡಿ
ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ ಯೋಜನೆಯನ್ನು ದುರ್ಬಲಗೊಳಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಡವರಿಗೆ ಅನ್ಯಾಯ ಮಾಡಿ ಜನವಿರೋಧಿಯಾಗಿದೆ ಎಂದು ದೂರಿದರು.
ಬಳಿಕ ಮಾತನಾಡಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚಿದಂಬರ ಹೂವಿನ ಕೋಣೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರದ ಅನ್ಯಾಯ ಮಾಡುತ್ತಿದೆ, ಗ್ರಾಮ ಪಂಚಾಯತಿ ಹಾಗೂ ಕಾರ್ಮಿಕರ ಹಕ್ಕು ಕಸಿದು
ಗ್ರಾಮ ಪಂಚಾಯಿತಿಗಳನ್ನು ನಿಷ್ಕ್ರೀಯ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಾ ಸುಬ್ರಮಣ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ಸದಾಶಿವ ಶೆಟ್ಟಿ, ಎಂಪಿ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿ ಕಟ್ಟೆ ಸುಬ್ರಹ್ಮಣ್ಯ, ಈಶ್ವರಪ್ಪ ಗೌಡ,ಸಾಕಮ್ಮ,ದೀಪಿಕ ಮಧುಸೂದನ್,ಸತೀಶ್,ಅಂಬರೀಶ್,,ಗುರು ಜಯನಗರ, ಊಬೇದ ಮುಂತಾದವರು ಉಪಸ್ಥಿತರಿದ್ದರು

PROTEST...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading