PSI HOSANAGARA:ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಪಿಎಸ್ಐ ಶಂಕರ್ ಗೌಡ ಪಾಟೀಲ್…

ಹೊಸನಗರ: ಬಕ್ರೀದ್‌ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಹೊಸನಗರ ಪೊಲೀಸ್ ಠಾಣ ಪಿಎಸ್ಐ ಶಂಕರ್ ಗೌಡ ಪಟೇಲ್ ಹೇಳಿದರು.
ಹೊಸನಗರ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಹೊಸನಗರ ಸಾಮರಸ್ಯಕ್ಕೆ ಹೆಸರಾಗಿದೆ. ಅಂಥ ಹೆಸರಿಗೆ ಚ್ಯುತಿಯಾಗದಂತೆ ನೋಡಿಕೊಳ್ಳಬೇಕು. ಕಾನೂನು
ಸು ವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿರುತ್ತದೆ ಹಿಂದೂ ಮುಸ್ಲಿಮರು ಒಟ್ಟಾಗಿ ಶಾಂತಿಯಿಂದ ಹಬ್ಬವನ್ನು ಆಚರಿಸುವಂತೆ ಅವರು ಮನವಿಯನ್ನ ಮಾಡಿದರು. ಶಾಂತಿ ಭಂಗ ಉಂಟಾಗುವಂತಹ ಯಾವುದೇ ಹೇಳಿಕೆಗಳನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದು ಹಾಗೂ ಫಾರ್ವರ್ಡ್ ಮಾಡಿ ಮತ್ತೊಬ್ಬರಿಗೆ ನೋವನ್ನು ಉಂಟು ಮಾಡುವುದು ಕಾನೂನಿನಲ್ಲಿ ಅಪರಾಧ ಹಾಗಾಗಿ ಈ ಸಭೆಯಲ್ಲಿರುವ ಎಲ್ಲ ಧರ್ಮದ ಮುಖಂಡರುಗಳು ಯುವಕರಿಗೆ ತಿಳಿ ಹೇಳಬೇಕು ಎಂದು ತಿಳಿಸಿದರು.
ಈ ಶಾಂತಿ ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.

PSI HOSANAGARA...


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading