
ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ರಸ್ತೆ ಕುಸಿತಗೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗಣಪತಿ ಹೊಸನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಘವೇಂದ್ರ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅನ್ನಪೂರ್ಣ, ರವಿ ಸುಮಾ, ಮಹಾಲಕ್ಷ್ಮಿ, ಬೂತ್ ಅಧ್ಯಕ್ಷರು ಶ್ರೀನಿಧಿ ರಮೇಶ್, ಪಕ್ಷದ ಮುಖಂಡರು ಗುರು ಪ್ರಸಾದ್, ಎ.ಆರ್. ಮಂಜುನಾಥ್, ಅರುಣ್ ಕುಮಾರ್, ಬಿ.ಆರ್. ಕೃಷ್ಣಮೂರ್ತಿ, ಎ.ಎನ್. ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸ್ಥಳೀಯ ಗ್ರಾಮಸ್ಥರು ರಸ್ತೆ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಹಾಲಪ್ಪ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲೇ ಅಗತ್ಯ ಕ್ರಮ ಜರುಗಿಸುವ ಭರವಸೆ ನೀಡಿದರು.
RIPPONPET NEWS..
Discover more from Prasarana news
Subscribe to get the latest posts sent to your email.
