
ರಿಪ್ಪನ್ ಪೇಟೆ,:ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಇಂದು ಮಧ್ಯಾಹ್ನ ನಡೆದ ದುರಂತದಲ್ಲಿ ಬಲೇನೋ ಕಾರು (KA 53 MD 0964) ಕೆರೆಗೆ ಉರುಳಿದ ಪರಿಣಾಮ 65 ವರ್ಷದ ವೃದ್ಧೆ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿ ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದರೂ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪಾರ್ವತಮ್ಮ (65), ಪತಿ ಕೋಂ. ಹುಚ್ಚಪ್ಪ ಅವರ ಪತ್ನಿ, ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡರು. ಮೃತದೇಹವನ್ನು ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
ಗಾಯಾಳುಗಳಾದ ಯುವಕ ಮತ್ತು ಯುವತಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿ, ತುರ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಿ ಚಿಕಿತ್ಸೆಗಾಗಿ ಸಹಕರಿಸಿದರು.
ಜೀವದ ಹಂಗು ತೊರೆದು ರಕ್ಷಣಾ ಕಾರ್ಯ
ಅಪಘಾತದ ಕ್ಷಣದಲ್ಲೇ ಮಾರ್ಗವಾಗಿ ಹಾದುಹೋಗುತ್ತಿದ್ದ ಯುವಕರಾದ ಕೋಟೆ ತಾರಿಗ ಗಿರೀಶ್, ಇಮ್ರಾನ್ ಹಾಗೂ ಮುತಾಲಿಬ್, ಜೀವದ ಹಂಗು ತೊರೆದು ಕೆರೆಗೆ ಹಾರಿ ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದು ಅಪಾರ ಧೈರ್ಯ ತೋರಿದರು. ಇವರ ಸಾಹಸಿಕತೆ ಸ್ಥಳೀಯರಿಂದ ಮೆಚ್ಚುಗೆ ಪಡೆದಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
RIPPONPET NEWS..
Discover more from Prasarana news
Subscribe to get the latest posts sent to your email.
