RIPPONPET NEWS:ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ರಿಪ್ಪನ್ ಪೇಟೆಯ ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು…

ರಿಪ್ಪನ್ ಪೇಟೆ : ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದ 14 ಹಾಗೂ 17 ವರ್ಷದೊಳಗಿನ ಕಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆಯ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಶಿವಮೊಗ್ಗ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಗೌರವ ಪಡೆದಿದ್ದಾರೆ.

14 ವರ್ಷದೊಳಗಿನ ವಿಭಾಗದಲ್ಲಿ ರಾಮಕೃಷ್ಣ ವಿದ್ಯಾಲಯದ ತಂಡವು ಪ್ರಥಮ ಸ್ಥಾನ ಗಳಿಸಿದ್ದು, 17 ವರ್ಷದೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಕಬಡ್ಡಿ ಕ್ರೀಡೆಯಲ್ಲಿ ತಮ್ಮ ಶೈಲಿಯನ್ನು ಮೆರೆದಿದ್ದಾರೆ.

ಈ ಸಾಧನೆಗೆ  ಸಂಸ್ಥೆಯ ಮುಖ್ಯಸ್ಥರಾದ ದೇವರಾಜ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಸಂತೋಷ ವ್ಯಕ್ತಪಡಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲೂ ವಿಜೇತರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕ್ರೀಡಾಭಿಮಾನಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

RIPPONPET NEWS..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading