
ರಿಪ್ಪನ್‌ಪೇಟೆ;-ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರ ಸಾಕಷ್ಟು ಉತ್ತೇಜನ ನೀಡಲಾಗುತ್ತಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸುವಂತಾಗಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧುಬಂಗಾರಪ್ಪ ಕರೆ ನೀಡಿದರು.
ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಯಳಗಲ್ಲು ಗ್ರಾಮದಲ್ಲಿ ಸುಮಾರು ೨೮ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆ ವಸತಿ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡಲಾಗಿದೆ.ಮಕ್ಕಳಲ್ಲಿ ದೇಶದ ಬಗ್ಗೆ ಶ್ರದ್ದೆ ಭಕ್ತಿ ಭಾವನೆ ನಮ್ಮ ಸಂಸ್ಕೃತಿಯನ್ನು ಬೆಳಸುವ ಮೂಲಕ ದೇಶಾಭಿಮಾನ ಮೂಡಿಸಲು ಸಾಧ್ಯ ಎಂದ ಅವರು 28 ಕೋಟಿ ರೂ ವೆಚ್ಚದಲ್ಲಿ 250 ಪರಿಶಿಷ್ಟ ಜಾತಿ ಜನಾಂಗದ ಮಕ್ಕಳಿಗಾಗಿ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವುದರೊಂದಿಗೆ ಬರುವ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಗಳಿಸುವ ಮೂಲಕ ಮಕ್ಕಳು 625 ಕ್ಕೆ 620 ಅಂಕ ಪಡೆದು ಉತ್ತೀರ್ಣತೆ ಹೊಂದುವAತಾಗ ಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು ಶಿಕ್ಷಕರು ಮಕ್ಕಳ ತೇರ್ಗಡೆಗೆ ಚಾಲೇಂಜ್ ತಗೆದುಕೊಳ್ಳುವಂತೆ ಸೂಚಿಸಿದರು.
ರಾಜ್ಯದಲ್ಲಿನ 10.16 ಕೋಟಿ ಶಾಲಾ ಮಕ್ಕಳಿಗಾಗಿ 1591 ಕೋಟಿ ರೂ ಹಣವನ್ನು ಖಚ್ಚು ಮಾಡುವ ಮೂಲಕ ಸರ್ಕಾರ ಬಿಸಿಯೂಟ ಮತ್ತು ಪಠ್ಯಪುಸ್ತಕ ಸಮವಸ್ತç ಸೇರಿದಂತೆ ವಾರದಲ್ಲಿ ಒಂದು ದಿನ ಪೌಷ್ಟಿಕ ಅಹಾರವಾಗಿ ಮೊಟ್ಟೆ ಹಾಲು ರಾಗಿ ಮಾಲ್ಟ್ ಹೀಗೆ ಹಲವು ಸೌಕರ್ಯಗಳನ್ನು ನೀಡಲಾಗುತ್ತಿದೆ.ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿ ಭಾಷೆಗೆ ಭೋದನೆಯನ್ನು ಆರಂಭಿಸಲಾಗಿ ತರಬೇತಿ ಹೊಂದಿರುವ ಶಿಕ್ಷಕರ ನೇಮಕಾತಿಯಲ್ಲಿ ವ್ಯತ್ಯಾಸವಾಗಿದೆ ಪ್ರಸಕ್ತ ಸಾಲಿನಲ್ಲಿ 11 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.ಮುಂದಿನ ಶೈಕ್ಷಣಿಕ ವರ್ಷದ ಅರು ತಿಂಗಳಲ್ಲಿ 35 ಸಹಸ್ರ ಶಿಕ್ಷಕರ ನೇಮಕಾತಿ ಬಗ್ಗೆ ಪ್ರಕ್ರಿಯೆ ಅರಂಭಿಸಲಾಗುವುದೆAದ ಅವರು ರಾಜ್ಯದಲ್ಲಿ 500 ಕೆ.ಪಿ.ಎಸ್.ಸಿ.ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಶೀಘ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಶಿವಮೊಗ್ಗ ಜಿಲ್ಲೆಯಿಂದಲೇ ಚಾಲನೆ ಕೊಡಿಸಲಾಗುವುದೆಂದ ಅವರು ಮಕ್ಕಳಲ್ಲಿ ಸಮಾನತೆ ಕಾಪಾಡುವ ಶಿಕ್ಷಣ ಇಂದಿನ ಅಗತ್ಯವಾಗಿದೆ.ಎಸ್.ಎಸ್.ಎಲ್.ಸಿ.ಕಡಿಮೆ ಅಂಕಬAದವರು ಪೇಲ್ ಅದ ವಿದ್ಯಾರ್ಥಿಗಳು ಚಿಂತಿಸುವ ಬದಲು ಅವರಿಗಾಗಿ ಮೂರು ಹಂತದಲ್ಲಿ ಪರೀಕ್ಷೆ ತಗೆದುಕೊಳ್ಳಲು ಅವಕಾಶ ನೀಡುವುದರೊಂದಿಗೆ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿ ಮುಂದಿನ ತರಗತಿಗೆ ಸರ‍್ರ್ಪಡೆಗೆ ಆವಕಾಶ ಕಲ್ಪಿಸಲಾಗಿದೆ ಎಂದರು.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಾಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು,ಹೊಸನಗರ ತಾಲ್ಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಬಿ.ಚಿದಂಬರ್,ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶಶೆಟ್ಟಿ, ಹುಂಚ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಸುಮಂಗಲ ದೇವರಾಜ್,ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿ.ಪಂ.ಮಾಜಿ ಸದಸ್ಯ ಜ್ಯೋತಿ ಚಂದ್ರುಮಾಳಿ, ತಾಲ್ಲೂಕ್ ಪಂಚಾಯಿತ್ ಮಾಜಿ ಸದಸ್ಯ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ಚಂದ್ರಮೌಳಿ, ತಹಶೀಲ್ದಾರ್ ಭರತ್‌ರಾಜ್ ಕೆ.ಎಸ್. ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ, ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಡಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಪ್ರಾಂಶುಪಾಲೆ ಚಂದ್ರಕಲಾ ಬಿ.ಇನ್ನಿತರರು ಹಾಜರಿದ್ದರು
RIPPONPET NEWS..
