

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ.
ರಿಪ್ಪನ್ ಪೇಟೆಯ ಮೇರಿಮಾತ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಶ್ವೇತಾ ಬಂಡಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಐದು ವರ್ಷಗಳ ಕಾಲ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಿಳಾ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಅವರು ಇದೀಗ ಜಿಲ್ಲಾ ಮಹಿಳಾ ಘಟಕದ ನೇತೃತ್ವ ವಹಿಸಿದ್ದಾರೆ.
RIPPONPET NEWS.
Discover more from Prasarana news
Subscribe to get the latest posts sent to your email.