
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇದಾದ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು.ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
S.M KRISHNA DIED
Discover more from Prasarana news
Subscribe to get the latest posts sent to your email.
