

ರಿಪ್ಪನ್ ಪೇಟೆ:, ಹುಂಚ ಜೈನ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ - ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು "ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗಿಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ, ಮೊರಾರ್ಜಿ ಶಾಲೆಗಳು ಮಾದರಿಯಾಗಿದೆ. ಈ ಶಾಲೆಗಳಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ನಾಲ್ಕು ವರ್ಷಗಳಿಂದ ಹುಂಚ ಗ್ರಾಮವ್ಯಾಪ್ತಿಯ ಮಕ್ಕಳಿಗೆ ಉಚಿತವಾಗಿ ನವೋದಯ ಪರೀಕ್ಷೆಗೆ ಅಣಿಗೋಳಿಸುವ ಸಂಸ್ಥೆಯ ಕಾರ್ಯವನ್ನು ಶ್ಲಾಗಿಸಿ, ಮಕ್ಕಳನ್ನು ಮತ್ತು ಪೋಷಕರನ್ನು ಅಭಿನಂದಿಸಿದರು".
ಈ ಶಿಬಿರದ ಸಂಸ್ಥಾಪಕರಾದ, ಹಳೆ ನವೋದಯ ವಿದ್ಯಾರ್ಥಿಯಾದ ಪ್ರಕಾಶ್ ಜೋಯ್ಸ್ ಶಿಬಿರದ ಮಕ್ಕಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ - "
ಈ ಶಿಬಿರ, ಕರ್ನಾಟಕ ರಾಜ್ಯದಲ್ಲಿ ಮೊದಲ ನೂತನ ಪ್ರಯೋಗವಾಗಿದ್ದು, ಉತ್ತಮ ಶಿಕ್ಷಣ ಬಯಸುವ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಸಿಗುವ ಸೌಲಭ್ಯ ಕಲ್ಪಿಸುವ ಒಂದು ವೇದಿಕೆ. ಈ ಯಶಸ್ಸಿಗೆ ಕಾರಣಕರ್ತರಾದ ಶಿಬಿರದ ಶಿಕ್ಷಕ ವೃಂದಕ್ಕೆ, ಸಂಚಾಲಕರಿಗೆ ಮತ್ತು ಮಕ್ಕಳಿಗೆ ಶುಭಾಶಯಗಳನ್ನು" ತಿಳಿಸಿದರು.
ವರದಿ:ಸಬಾಸ್ಟಿನ್ ಮ್ಯಾಥ್ಯೂಸ್.ರಿಪ್ಪನ್ ಪೇಟೆ.
SRI KSHETRA HOMBUJA.
Discover more from Prasarana news
Subscribe to get the latest posts sent to your email.