
ಹೊಸನಗರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೂರು ಜನ ವಿದ್ಯಾರ್ಥಿಗಳಿಗೆ ಒಂದು ದಿನಗಳ ಉಚಿತ ಪ್ರವಾಸವನ್ನು ಕಲ್ಪಿಸುವ ಮೂಲಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ವಿನಿ ಕುಮಾರ್ ಗಮನ ಸೆಳೆದಿದ್ದಾರೆ.
ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೂರು ಜನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದ ಎಲ್ಲಾ ಮಕ್ಕಳು ಉತ್ತೀರ್ಣರಾಗುವ ಮೂಲಕ ಸರ್ಕಾರಿ ಶಾಲೆಗೆ ನೂರರಷ್ಟು ಫಲಿತಾಂಶವನ್ನು ನೀಡಿದ್ದರು ಈ ಹಿನ್ನೆಲೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸುವ ಉದ್ದೇಶದಿಂದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಒಂದು ದಿನ ಪ್ರವಾಸದ ವಾಹನ ವ್ಯವಸ್ಥೆಯ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ಗಮನ ಸೆಳೆದರೆ ಮಕ್ಕಳ ಊಟ ಮತ್ತು ಉಪಹಾರ ವ್ಯವಸ್ಥೆಯನ್ನು ಶಾಲಾ ಶಿಕ್ಷಕರು ನಿರ್ವಹಿಸಲಿದ್ದದ್ದು ವಿಶೇಷ...
SSLC RESULT..
Discover more from Prasarana news
Subscribe to get the latest posts sent to your email.
