STRIKE:HOSANAGARA:ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಪ್ರತಿಭಟನೆ…

ಹೊಸನಗರ: ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘ ಹೊಸನಗರ ತಾಲ್ಲೂಕು ಘಟಕದ ವತಿಯಿಂದ ಎರಡನೇ ಹಂತದ ಅನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಳ್ಳಲಾಯಿತು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಹೊಸನಗರ ಘಟಕದ ಅಧ್ಯಕ್ಷರಾದ ನವೀನ್ ಕುಮಾರ್ ಈ ಕುರಿತಾಗಿ ಮಾತನಾಡಿ
ಈ ಹಿಂದೆ ಧರಣಿ ನಡೆಸಿದಾಗ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಕೆಲಸದ ಒತ್ತಡ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.ಮೊಬೈಲ್ ಆಧರಿತ ಕೆಲಸ ನಿರ್ವಹಿಸಲು ಯಾವುದೇ ಮೂಲಭೂತ ಸೌಲಭ್ಯಗಳನ್ನು ನೀಡದೆ ಕಾರ್ಯ ಪ್ರಗತಿಗೆ ಒತ್ತಡ ಹೇರುತ್ತಿರುವುದರಿಂದ ಅಧಿಕಾರಿಗಳಿಗೆ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ, ಸರ್ಕಾರ ಕೂಡಲೇ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ನೀಡಬೇಕು, ಉತ್ತಮ ಗುಣಮಟ್ಟದ ಟೇಬಲ್, ಕುರ್ಚಿ, ಅರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್, ಬುಕ್ ಲ್ಯಾಪ್ ಟಾಪ್, ಪ್ರಿಂಟ‌ರ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸಿ ಕೊಡಬೇಕು. ಮೊಬೈಲ್ ತಂತ್ರಾಂಶಗಳ ಕೆಲಸ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಭದ್ರತೆ ನೀಡಿ ಮತ್ತು ಸುರಕ್ಷಿತವಾದ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಬಂಡಿ ಸೋಮಣ್ಣ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿಯಾದ ಮಂಜು ಸಣ್ಣಕ್ಕಿ ಅವರಿಗೆ ತಮ್ಮ ಬೇಡಿಕೆ ಯನ್ನ ಸರ್ಕಾರಕ್ಕೆ ತಲುಪಿಸುವಂತೆ ಮನವಿಯನ್ನು ಸಲ್ಲಿಸಿದರು.  ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊಸನಗರ ಖಜಾಂಚಿ ಗಣೇಶ್
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹೊಸನಗರ ಶಾಖೆ ಯ ಅಧ್ಯಕ್ಷರಾದ ನವೀನ್ ಕುಮಾರ್
ಕಾರ್ಯದರ್ಶಿ ಸಿದ್ದಪ್ಪ ಚೂರೇರ್
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

STRIKE:HOSANAGARA..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading

Subscribe