Flash News

TEACHERS DAY:ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಜ್ಞಾನವನ್ನು ಹೊರತರುವ ಶಿಲ್ಪಿಗಳು: ಗೋಪಾಲಕೃಷ್ಣ ಬೇಳೂರು

ಹೊಸನಗರ:ಕಲ್ಲಿನಲ್ಲಿ ಅಡಗಿರುವ ಸುಂದರ ಮೂರ್ತಿಯನ್ನು ಶಿಲ್ಪಿಯು ತನ್ನ ಉಳಿ-ಸುತ್ತಿಗೆಗಳಿಂದ ಅನಗತ್ಯ ಭಾಗಗಳನ್ನು ಕೆತ್ತಿ ಹೊರತರುವಂತೆ, ಶಿಕ್ಷಕರು ಕೂಡ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಜ್ಞಾನವನ್ನು ಹೊರತರುವ ಶಿಲ್ಪಿಗಳು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಪಟ್ಟಣದ ಈಡಿಗರ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವು ದೇಶದ ಪ್ರಗತಿಯಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಈ ನಿಟ್ಟಿನಲ್ಲಿ ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದ್ದು ಅದರಂತೆ ನಮ್ಮ ತಾಲೂಕಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯವನ್ನ ನಿರ್ವಹಿಸುತ್ತಿದ್ದು ಶೈಕ್ಷಣಿಕ ಸಾಧನೆಗಳು ಸಹ ತಾಲೂಕು ಮುಂಚೂಣಿಯಲ್ಲಿದೆ ಎಂದ ತಿಳಿಸಿದರು ಅಲ್ಲದೆ ಈಗಾಗಲೇ ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಲು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಿದ್ದು ಶಿಕ್ಷಕರ ಕೊರತೆಯೂ ಸಹ ನಿವಾರಣೆಯಾಗಲಿದೆ ಎಂದರು. ಶಿಕ್ಷಕರ ತ್ಯಾಗ, ನಿಸ್ವಾರ್ಥ ಸೇವಾ ಮನೋಭಾವ, ಕರ್ತವ್ಯನಿಷ್ಠೆ ಮತ್ತು ಸಮಯಪ್ರಜ್ಞೆಯಿಂದ ಕೂಡಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಅನನ್ಯ ವಾದದ್ದು ಇದರ ಜೊತೆಗೆ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕೆಲಸವನ್ನು ಶಿಕ್ಷಕರು ಮಾಡಬೇಕಿದ್ದು ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತಂದಲ್ಲಿ ಆ ಶಿಕ್ಷಕರಿಗೆ ನಾನು ವೈಯಕ್ತಿಕವಾಗಿ 10,000 ರೂಗಳನ್ನು ಬಹುಮಾನವಾಗಿ ನೀಡಲಿದ್ದೇನೆ ಎಂದು ಈ ಸಂದರ್ಭದಲ್ಲಿ ಘೋಷಿಸಿದರು.
ಜೊತೆಗೆ ಶಿಕ್ಷಕರಿಗೆ ಬೇಕಿರುವ ಎಲ್ಲಾ ಅಗತ್ಯ ಸೌಲಭಯಗಳನ್ನು ಕಲ್ಪಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಶಿಕ್ಷಣ ಇಲಾಖೆಯ ಅತ್ಯುತ್ತಮ ಶಿಕ್ಷಕರು, ವಿಶೇಷ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು.ಜೊತೆಗೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಬದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಬಿ ಚಿದಂಬರ್, ತಹಶೀಲ್ದಾರ್ ಭರತ್ ರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ ಗಣೇಶ್, ವಿವಿಧ ಸಂಘಗಳ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಶಿಕ್ಷಕರುಗಳು ಉಪಸ್ಥಿತರಿದರು.

TEACHERS DAY..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading