TIRTAHALLI:ತೀರ್ಥಹಳ್ಳಿಯಲ್ಲಿ ಸಿಎಂ ಸಂವಾದ ಕಾರ್ಯಕ್ರಮ: ಪಕ್ಷಾತೀತವಾಗಿ ಪಾಲ್ಗೊಳ್ಳುವಂತೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಆಹ್ವಾನ.

ಹೊಸನಗರ: ಮಲೆನಾಡಿಗೆ ಮಾರಕವಾಗುವ ಕಸ್ತೂರಿರಂಗನ್ ವರದಿ 7ನೇ ಅಧಿಸೂಚನೆ ಪ್ರಕಟಗೊಂಡ ಹಿನ್ನೆಲೆ ರೈತರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸೆ.19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದು ರೈತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಈ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರತಿಯೊಬ್ಬರು ಪಕ್ಷಾತೀತವಾಗಿ ಪಾಲ್ಗೊಳ್ಳುವಂತೆ ಹೊಸನಗರ ಬ್ಲಾಕ್ ಕಾಂಗ್ರೆಸ್  ಆಹ್ವಾನಿಸಿದೆ.
ಈ ಕುರಿತಾಗಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜಿ ಚಂದ್ರಮೌಳಿ ಕಸ್ತೂರಿ ರಂಗನ್ ಜಾರಿಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಸಾಧಕ-ಬಾಧಕಗಳ ಚರ್ಚೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿಯೇ ಮಾಡಿ ಎಂದು ಮುಖ್ಯಮಂತ್ರಿಗಳ ಬಳಿ ಬಳಿ ಮನವಿ ಮಾಡಿದ ಹಿನ್ನೆಲೆ ರೈತರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸೆ.19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದರು
ಕಸ್ತೂರಿ ರಂಗನ್ ವರದಿಯ ಬಗ್ಗೆ ತೀರ್ಥಹಳ್ಳಿಯ ಪದವಿಪೂರ್ವ ಕಾಲೇಜಿನಲ್ಲಿ ರೈತರೊಂದಿಗೆ ಸಂವಾದ ಹಾಗೂ ಅನಂತಮೂರ್ತಿ ಪ್ರೌಢ ಶಾಲೆ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಮಲೆನಾಡಿನ ರೈತರು ಕೃಷಿ ಕಾರ್ಮಿಕರು ಹಾಗೂ ಸ್ಥಳೀಯ ಜನರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿಯನ್ನ ಪಡೆಯಲಿದ್ದಾರೆ ಎಂದು ತಿಳಿಸಿದರು.
ಅಲ್ಲದೆ  ಸೆ. 21ರಿಂದ 23ರವರೆವಿಗೆ ವಿಶೇಷ ಅಧಿವೇಶನವೂ ನಡೆಯಲಿದ್ದು ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯ ಆಲಿಸುವ ಪ್ರಕ್ರಿಯೆಯ ಭಾಗವಾಗಿ ಈ ಸಭೆ ಮುಖ್ಯವಾಗಿರುತ್ತದೆ ಆದ್ದರಿಂದ
ಸೆ.19ರಂದು ನಡೆಯುವ ಸಭೆಗೆ ಹೊಸನಗರ ತಾಲೂಕಿನ ಎಲ್ಲ ರೈತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿಕೊಡುವುದರ ಜೊತೆಗೆ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣ ವಿರೋಧಿಸುವ ನಮ್ಮ ಗೊತ್ತಾಯವನ್ನ ಮುಖ್ಯಮಂತ್ರಿಗಳಿಗೆ ಮನವರಿಕೆಯನ್ನು ಮಾಡೋಣ ಎಂದರು
ಈ ಪತ್ರಿಕಾ ಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ ಚಿದಂಬರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸದಾಶಿವ ಶ್ರೇಷ್ಠಿ, ಜಯಶೀಲಪ್ಪ ಗೌಡ, ಪ್ರಭಾಕರ್, ಅಶ್ವಿನಿಕುಮಾರ್, ಜಯನಗರ ಗುರು, ಶುಭಾಕರ, ಗೋಪಾಲ್, ಉಬೈದುಲ್ಲಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

TIRTAHALLI..


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading