V A OFFICER: ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಒತ್ತಾಯ..

ಹೊಸನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಮಾಗಡಿ ತಾಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯ ನಿರತ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹೊಸನಗರ ಘಟಕ ಬುಧವಾರ ಹೊಸನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿ ತಹಸಿಲ್ದಾರ್ ಭರತ್ ರಾಜ್ ಅವರಿಗೆ ಮನವಿಯನ್ನ ಸಲ್ಲಿಸಿತು.
ದಿನಾಂಕ 26-05-26 ರಂದು ಮಾಗಡಿ ತಾಲೂಕಿನ ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ನಕಾಶೆ ಕಂಡ ದಾರಿ ತೆರವು ಮಾಡುವ ಸಂದರ್ಭದಲ್ಲಿ ತಾಲೂಕು ಸರ್ವೆ ಅಧಿಕಾರಿ ಹಾಗೂ ಸಹಾಯಕರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ ಹಡಗಲಿ ಹೊನ್ನಪ್ಪ ಅವರ ಮೇಲೆ ಕೆಲವರು ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆಯನ್ನ ನಡೆಸಿದ್ದು ಇದರಿಂದ ಗ್ರಾಮ ಆಡಳಿತ ಅಧಿಕಾರಿ ಗಂಭೀರ ಸ್ವರೂಪದ ಗಾಯಗಳಾಗಿವೆ ಆದ್ದರಿಂದ ಹಲ್ಲೆ ನಡೆಸಿದವರು ವಿರುದ್ಧ ಕಠಿಣ ಕಾನೂನು ಕ್ರಮವನ್ನು ಜರುಗಿಸುವ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಸರ್ಕಾರಿ ನೌಕರರಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅಗತ್ಯ ಕಾನೂನು ಕ್ರಮ ಹಾಗೂ ರಕ್ಷಣೆಯನ್ನು ನೀಡುವಂತೆ ಈ ಮೂಲಕ ಮನವಿಯನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಹೊಸನಗರ ಅಧ್ಯಕ್ಷರು ಹಾಗೂ ಸದಸ್ಯರುಗಳು ಪಾಲ್ಗೊಂಡಿದ್ದರು.

V A OFFICER


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading