
ಹೊಸನಗರ: ರಾಜ್ಯದಲ್ಲಿ ಸೋಮವಾರ ಶಾಲಾ ಕಾಲೇಜುಗಳು ಪುನರಾರಂಭಗೊಂಡಿವೆ. ಬಹುತೇಕ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂದಿತು.
ಈ ಹಿನ್ನೆಲೆ ಇಂದು ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026/27 ನೇ ಸಾಲಿನ ಪ್ರಥಮ ಪಿಯುಸಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಬೋಧಕ ವೃಂದ ಆತ್ಮೀಯವಾಗಿ ಸ್ವಾಗತಿಸಿತು.

ಕಾಲೇಜನ್ನ ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಹಿರಿಯ ಉಪನ್ಯಾಸಕರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್. ಎಚ್. ಹಿರಿಯ ಉಪನ್ಯಾಸಕರಾದ ದಮೋದರ ಶೆಣೈ ಹಾಗೂ ಎಲ್ಲಾ ಹಿರಿಯ ಕಿರಿಯ ಉಪನ್ಯಾಸಕರು ಉಪಸ್ಥಿತರಿದ್ದರು..
WELCOME CEREMONY..
Discover more from Prasarana news
Subscribe to get the latest posts sent to your email.
