GRAND CELEBRATION: ಗೋಪಾಲಕೃಷ್ಣ ಬೇಳೂರು ಹುಟ್ಟುಹಬ್ಬ ಸಂಭ್ರಮ…
ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳೂ ಕಾರ್ಯಕ್ರಮ ಪಾಲ್ಗೊಳ್ಳುವ ನಿರೀಕ್ಷೆ: “ಮಾಸ್ತಿಕಟ್ಟೆ ಸುಬ್ರಹ್ಮಣ್ಯ “..

ಹೊಸನಗರ: ಇದೆ ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಆಚರಣ ಸಮಿತಿಯ ಅಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ತಿಳಿಸಿದರು.
ಕುರಿತಾಗಿ ಹೊಸನಗರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ಷೇತ್ರದ ಜನಪ್ರಿಯ, ಜನಸ್ನೇಹಿ, ಅಭಿವೃದ್ಧಿಯ ಹರಿಕಾರರಾದಂತಹ ಶಾಸಕರ ಹುಟ್ಟುಹಬ್ಬವನ್ನು ಈ ಬಾರಿ ಹೊಸನಗರದಲ್ಲಿ ಆಚರಿಸುವ ಅವಕಾಶ ಸಿಕ್ಕಿದ್ದು ಈ ಒಂದು ಸಂಭ್ರಮವನ್ನು ಅದ್ದೂರಿಯಾಗಿ ಹೊಸನಗರದ ನೆಹರು ಮೈದಾನದಲ್ಲಿ ಫೆಬ್ರವರಿ 22ರ ಶನಿವಾರ ಸಂಜೆ 6:00 ಗಂಟೆ ಯಿಂದ ಆಚರಿಸಲು ಸಮಿತಿ ತೀರ್ಮಾನಿಸಿದೆ ಇದರ ಅಂಗವಾಗಿ  ಸುಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಾರಥ್ಯದಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ನಟಿ-ನಿರೂಪಕಿ ಅನುಶ್ರೀ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅಲ್ಲದೆ ಪ್ರಸಿದ್ಧ ಚಿತ್ರನಟರಾದ ಲೂಸ್ ಮಾದ ಖ್ಯಾತಿಯ ಯೋಗಿ, ರವಿಶಂಕರ್ ಮತ್ತು ವಿರಾಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು   ವೇದಿಕೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ, ಪ್ರಸನ್ನ ಕುಮಾರ್, ಇನ್ನು ಮುಂತಾದ ಜಿಲ್ಲೆಯ ಪ್ರಮುಖ ನಾಯಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

"ಸಾಧಕರಿಗೆ ಸನ್ಮಾನ.."

ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಸೇರಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದವರನ್ನು ಸನ್ಮಾನ ಕಾರ್ಯಕ್ರಮ ನೆರವೇರಲಿದೆ.

"ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜೊತೆಗೆ ಶಾಲಾ-ಕಾಲೇಜುಗಳಿಗೆ ಸಿಹಿ ಹಂಚಿಕೆ..."

ಶಾಸಕರ ಹುಟ್ಟು ಹಬ್ಬದ ದಿನದಂದು ಎಲ್ಲ ದೇವಾಲಯಗಳಲ್ಲೂ ವಿಶೇಷ ಪೂಜೆಯ ಜೊತೆಗೆ ತಾಲೂಕಿನ ಪ್ರತಿ ಶಾಲಾ ಕಾಲೇಜುಗಳಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳಿಂದ ಸಿಹಿ ಹಂಚುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ...
 
ಈ ಕುರಿತಾಗಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಶ್ರೀ ಬೇಳೂರು ಅವರ ಸೇವೆ ಮತ್ತು ನಾಯಕತ್ವವನ್ನು ಗೌರವಿಸಲು ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಬೇಕು ಎಂದು ಸಮಿತಿ ಕೋರಿದ್ದಾರೆ.  ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕಲಗೋಡು ರತ್ನಾಕರ್, ವಿದ್ಯಾಧರ್ ಗುರುಶಕ್ತಿ, ಚಂದ್ರ ಮೌಳಿ ಬಿಜಿ, ಸುಮ ಸುಬ್ರಮಣ್ಯ, ಮಂಜು ಸಣ್ಣಕ್ಕಿ, ಶ್ರೀಧರ್, ಸುದೀಪ್, ಗುರು ಜಯನಗರ, ಮುಂತಾದವರು ಉಪಸ್ಥಿತರಿದ್ದರು....

GRAND CELEBRATION..


Discover more from Prasarana news

Subscribe to get the latest posts sent to your email.

  • Related Posts

    HARATHALU HALAPPA:   ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದಾರೆ: ಹರತಾಳು ಹಾಲಪ್ಪ…

    ಹೊಸನಗರ: ಅರಣ್ಯ ಒತ್ತುವರಿ ಜಾಗ ತೆರವು ನೆಪದಲ್ಲಿ ಬಡ ಕುಟುಂಬಗಳನ್ನು ಬೀದಿಗೆ ತರುವ ಕೆಲಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು…

    Read more

    RIPPONPET NEWS: ಕಾಲಭೈರವೇಶ್ವರ ಮಹಿಳಾ ಸಂಘದಿಂದ ಶರ್ಮಿನ್ಯಾವತಿ ನದಿಗೆ ಬಾಗಿನ ಅರ್ಪಣೆ..

    ರಿಪ್ಪನ್ ಪೇಟೆ: ಈ ಬಾರಿ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಕಾಲಭೈರವೇಶ್ವರ ಮಹಿಳಾ ಸಂಘದ ವತಿಯಿಂದ ಗವಟೂರಿನ ಶರ್ಮಿನ್ಯಾವತಿ ನದಿಗೆ ಶುಕ್ರವಾರ ಬಾಗಿನ ಅರ್ಪಿಸಲಾಯಿತು. ಈ ಬಗೆಯ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಆಚರಣೆ ಮಹಿಳಾ ಸಂಘದ ಸದಸ್ಯರ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading