

ಹೊಸನಗರ: ತಾಲೂಕಿನ ವಾರಂಬಳ್ಳಿ- ಈರಗೋಡು ಶ್ರೀ ಕಲ್ಯಾಣಿೇಶ್ವರ ದೇವರ ತೃತೀಯ ವರ್ಷದ ವಾರ್ಷಿಕೋತ್ಸವ ವನ್ನು ದಿನಾಂಕ 31-01-2025 ನೆ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ತಿಳಿಸಿದೆ.
ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ಶ್ರೀ ಸದಾನಂದ ಶಿವಯೋಗಾಶ್ರಮ, ಮೂಲೆ ಗದ್ದೆ ಮಠ ಇವರ ದಿವ್ಯ ಸಾನಿಧ್ಯ ಮತ್ತು ಆಶೀರ್ವಚನ ನಡೆಯಲಿದ್ದು ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಥಳೀಯ ಯುವಕರನ್ನ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅಲ್ಲದೆ ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣ ಕಾರ್ಯಕ್ರಮವನ್ನು ಸಹ ಟ್ರಸ್ಟ್ ಹಮ್ಮಿಕೊಂಡಿದೆ.

ಇದೇ ದಿನ ಬೆಳಗ್ಗೆ 9:30 ರಿಂದ ದೇವಸ್ಥಾನ ಆವರಣದಲ್ಲಿ ಶ್ರೀ ಕಲ್ಯಾಣೇಶ್ವರ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಪ್ರಾಥಮಿಕ ಆರೋಗ್ಯ ಕೇಂದ್ರ ಸೊನಲೆ ಇವರ ಆಶ್ರಯದಲ್ಲಿ ರಕ್ತ ಕೇಂದ್ರ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಸಿಮ್ಸ್ ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಲು ಸಮಿತಿ ಕೋರಿದೆ...
HOSANAGARA..
Discover more from Prasarana news
Subscribe to get the latest posts sent to your email.