SHAKTI SCHEME:ಶಕ್ತಿ ಯೋಜನೆ: 500 ಕೋಟಿ ಮಹಿಳೆಯರ ಪ್ರಯಾಣ; ಸಿಹಿ ಹಂಚಿ ಸಂಭ್ರಮಿಸಿದ ಹೊಸನಗರ ಬ್ಲಾಕ್ ಕಾಂಗ್ರೆಸ್…

ಹೊಸನಗರ: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಇಂದು ಹೊಸನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್ ಬಿ ಚಿದಂಬರ್ ನೇತೃತ್ವದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿತು ಅಲ್ಲದೆ ಈ ಸಂದರ್ಭದಲ್ಲಿ ಸರ್ಕಾರಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರನ್ನ ಸನ್ಮಾನಿಸಲಾಯಿತು.
ಬಳಿಕ ಮಾತನಾಡಿದ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್ ಬಿ ಚಿದಂಬರ್ ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ" ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು ಇದರಿಂದ ಕೋಟ್ಯಾಂತರ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದರು.ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳ ಬಗ್ಗೆ ನಾವು ತಲೆಯನ್ನು ಕೆಡಿಸಿಕೊಳ್ಳುವುದಿಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸುವಂತಹ ಎಲ್ಲ ಯೋಜನೆಗಳು ಜನಪರವಾದದ್ದು ಅವುಗಳು ನಿರಂತರವಾಗಿ ಮುಂದುವರೆಯಲಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ" ಎಂದರು.
ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ. ಈ ಒ ನರೇಂದ್ರ ಕುಮಾರ್, ಪಾ ಪಂ ಸದಸ್ಯ ಅಶ್ವಿನಿ ಕುಮಾರ್, ಸಿಂಥಿಯಾ ಸೆರಾವು, ಶಾಹಿನಾಸಿೀರ್, ಗುಲಾಬಿ ಮರಿಯಪ್ಪ ಗುರುರಾಜ್, ಮುಖಂಡರಾದ ಬಂಡಿ ರಾಮಚಂದ್ರ, ಯರಗಿ ಉಮೇಶ್, ಸದಾಶಿವ, ಗುರು ಜಯನಗರ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು..

SHAKTI SCHEME..


Discover more from Prasarana news

Subscribe to get the latest posts sent to your email.

  • Related Posts

    RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

    ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

    Read more

    RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

    ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading